ಕನ್ನಡದ ಖ್ಯಾತ ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ಜೈಲು ಸೇರಿದ್ದಾರೆ. ಈ ಪ್ರಕರಣ ಸದ್ಯ ತನಿಖೆಯ ಹಂತದಲ್ಲಿದ್ದು, ದಿನದಿಂದ ದಿನಕ್ಕೆ ಹಲವು ತಿರುವುಗಳನ್ನು ಪಡೆಯುತ್ತಿದೆ. ನಟ ದರ್ಶನ್ ಪರ ಭಾವನಾ ರಾಮಣ್ಣ, ಹಿರಿಯ ನಟಿ ಶ್ರುತಿ ಸೇರಿದಂತೆ ಅನೇಕರು ಮಾತನಾಡಿದ್ದರು. ಈಗ ತೆಲುಗಿನ ನಟ ನಾಗ ಶೌರ್ಯ (Naga Shaurya) ಅವರು ದರ್ಶನ್ ಪರ ನಿಂತಿದ್ದಾರೆ. ದರ್ಶನ್ (Darshan) ಪ್ರಕರಣದ ಕುರಿತು ನಟ ಸೋಷಿಯಲ್ ಮೀಡಿಯಾದಲ್ಲಿ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಕಾಮೆಂಟ್ ಕಿರುಕುಳ- ನೋವು ಹಂಚಿಕೊಂಡ ಸೋನು
ಈ ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ, ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
View this post on Instagram
ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಸಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ ಎಂದು ದರ್ಶನ್ ಪರ ನಾಗ ಶೌರ್ಯ ಧ್ವನಿಯೆತ್ತಿದ್ದಾರೆ.
ಅಂದಹಾಗೆ, ತೆಲುಗಿನ ಚಲ್ಲೋ, ರಂಗಬಲಿ, ಲಕ್ಷ್ಯ, ಓ ಬೇಬಿ, ಓಕಾ ಮನಸ್ಸು ಸೇರಿದಂತೆ ಹಲವು ಚಿತ್ರಗಳಲ್ಲಿ ನಾಗ ಶೌರ್ಯ ನಟಿಸಿದ್ದಾರೆ.