7 ವರ್ಷದ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಂಬೈ ಸ್ಥಳೀಯ ಕೋರ್ಟ್ ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರನ್ನು ದೋಷಿ ಎಂದು ಹೇಳಿದೆ. ಇದನ್ನೂ ಓದಿ:ಕಾಂತಾರ 2ಗೆ ಬಿಗ್ ರಿಲೀಫ್ – ಅಧಿಕಾರಿಗಳಿಂದ ಕ್ಲೀನ್ ಚಿಟ್
Advertisement
2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ (Cheque Bounce) ಕೇಸ್ ದಾಖಲಾಗಿತ್ತು. ಮಹೇಶ್ಚಂದ್ರ ಮಿಶ್ರಾ ಎನ್ನುವವರು ನಿರ್ದೇಶಕನ ಮೇಲೆ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ಕೊಟ್ಟಿದ್ದರೂ ಕೂಡ ಅವರು ಹಾಜರಾಗಿರಲಿಲ್ಲ.
Advertisement
Advertisement
ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿ ಮೂರು ತಿಂಗಳ ಒಳಗಾಗಿ ಮಿಶ್ರಾ ಅವರಿಗೆ 3.72 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಆದೇಶಿಸಿದೆ. ಒಂದು ವೇಳೆ ಈ ಅವಧಿಯ ಒಳಗಾಗಿ ಹಣ ಪಾವತಸಿದೇ ಇದ್ದರೆ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಂದು ಆದೇಶದಲ್ಲಿ ತಿಳಿಸಿದೆ.