ಟಾಲಿವುಡ್ (Tollywood) ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರ ತಂದೆ, ತೆಲುಗಿನ ಸೂಪರ್ ಸ್ಟಾರ್ ಆಗಿದ್ದ ಕೃಷ್ಣ ಅವರನ್ನು ನಿನ್ನೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯು ಹೆಲ್ತ್ ಬುಲೆಟಿನ್ (Health Bulletin) ಬಿಡುಗಡೆ ಮಾಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ. ಹಾಗಾಗಿಯೇ ಅವರನ್ನು ಐಸಿಯುಗೆ ಸ್ಥಳಾಂತರಿಸಿ, ಅಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಿದ್ದಾರಂತೆ.
ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದ್ದು, ನುರಿತ ವೈದ್ಯರ ತಂಡ ಕೃಷ್ಣ ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ತೀರಾ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಕುಟುಂಬದ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ. ಇತ್ತೀಚೆಗಷ್ಟೇ ಕೃಷ್ಣ ಅವರು ಹೆಂಡತಿಯನ್ನು ಕಳೆದುಕೊಂಡಿದ್ದರು. ಆ ನೋವಲ್ಲೇ ಅವರು ದಿನಗಳನ್ನು ಕಳೆಯುತ್ತಿದ್ದರು. ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್
80 ವರ್ಷದ ಕೃಷ್ಣ (Krishna) ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಅವರನ್ನು ತೀವ್ರ ನಿಗಾಘಟದಲ್ಲಿ ಸ್ಥಳಾಂತರಿಸಿದ ಚಿಕಿತ್ಸೆ ಮುಂದುವರೆಸಿದ್ದಾರೆ. ವೆಂಟಿಲೇಟರ್ ಮೂಲಕವೇ ಅವರು ಉಸಿರಾಡುತ್ತಿದ್ದಾರೆ. ನಿನ್ನೆ ಹೃದಯಾಘಾತವಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು ಎಂದೂ ಹೇಳಲಾಗುತ್ತಿದೆ. ಕೃಷ್ಣ ಅವರನ್ನು 24 ಗಂಟೆ ಆಬ್ಸರ್ವೇಷನ್ ನಲ್ಲಿ ಇಡಲಾಗಿದ್ದು, ಅವರಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.