ನವದೆಹಲಿ: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ ಕಾಂಗ್ರೆಸ್ನ ಅನೇಕ ನಾಯಕರು ಬಿಜೆಪಿ ಸೇರ್ಪಡೆಯಾಗುತ್ತಿದ್ದರೆ. ಇದಕ್ಕೆ ಈಗ ಹೊಸದಾಗಿ ಎಂಬಂತೆ ಕಾಂಗ್ರೆಸ್ನ ಹಿರಿಯ ನಾಯಕ, ಒಂದು ಕಾಲದಲ್ಲಿ ಸೋನಿಯಾ ಗಾಂಧಿ ಅವರ ಆಪ್ತರಾಗಿದ್ದ ಟಾಮ್ ವಡಕ್ಕನ್ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ ಗುರುವಾರ ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ.
ಪಾಕಿಸ್ತಾನದ ಬಾಲಕೋಟ್ ಉಗ್ರರ ಶಿಬಿರದ ಮೇಲೆ ಭಾರತೀಯ ವಾಯು ಪಡೆ ನಡೆಸಿದ ಏರ್ ಸ್ಟ್ರೈಕ್ ಹಾಗೂ ದೇಶದ ಸಶಸ್ತ್ರ ಪಡೆಯಗಳ ಕುರಿತು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಒಂದು ರಾಜಕೀಯ ಪಕ್ಷವೇ ದೇಶದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಹೀಗಾಗಿ ನಾನು ಪಕ್ಷವನ್ನು ತ್ಯಜಿಸುವುದು ಅನಿವಾರ್ಯವಾಯಿತು ಎಂದು ಟಾಮ್ ವಡಕ್ಕನ್ ತಿಳಿಸಿದ್ದಾರೆ.
Advertisement
Delhi: Congress leader Tom Vadakkan joins Bharatiya Janata Party in presence of Union Minister Ravi Shankar Prasad. pic.twitter.com/7AtbF2QfHj
— ANI (@ANI) March 14, 2019
Advertisement
ಕಾಂಗ್ರೆಸ್ ಪಕ್ಷದಲ್ಲಿ ನಾಯಕರನ್ನು ಬಳಸಿಕೊಂಡು, ಬೇಡವಾದಾಗ ಕೈಬಿಡಲಾಗುತ್ತಿದೆ. ಅಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
Advertisement
ಟಾಮ್ ವಡಕ್ಕನ್ ಯಾರು?:
ಸೋನಿಯಾ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾಗ ಟಾಮ್ ವಡಕ್ಕನ್ ಅವರು ಮಾಧ್ಯಮ ಸಲಹೆಗಾರರಾಗಿದ್ದರು. ಈ ಮೂಲಕ ಸುಮಾರು 20 ವರ್ಷಗಳಿಂದ ಪಕ್ಷದಲ್ಲಿದ್ದು, ಸೋನಿಯಾ ಗಾಂಧಿ ಅವರ ನಿಕಟವರ್ತಿ ಹಾಗೂ ಕಾಂಗ್ರೆಸ್ ವಕ್ತಾರರಾಗಿ ಟಾಮ್ ಕೆಲಸ ಮಾಡಿದ್ದಾರೆ. ಆದರೆ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಬರುತ್ತಿದ್ದಂತೆ ಹೊಸ ಮಾಧ್ಯಮ ಸಲಹಾ ತಂಡವನ್ನು ರಚಿಸಿಕೊಂಡರು. ಇದರಿಂದಾಗಿ ಟಾಮ್ ಕಡೆಗಣಿಸಲ್ಪಟ್ಟಿದ್ದರು. ಅಷ್ಟೇ ಅಲ್ಲದೇ ಕೇರಳದಿಂದ ಲೋಕಸಭೆ ಚುನಾವಣಾ ಕಣಕ್ಕೆ ಇಳಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಹಿಂದೇಟು ಹಾಕಿತ್ತು. ಈ ಎಲ್ಲ ಬೆಳವಣಿಗೆಯಿಂದಾಗಿ ಟಾಮ್ ಅವರು ಕಾಂಗ್ರೆಸ್ಗೆ ಗುಡ್ಬೈ ಹೇಳಿ ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.
Advertisement
ಪಕ್ಷಕ್ಕೆ ಸೇರ್ಪಡೆಯಾದ ಟಾಮ್ ವಡಕ್ಕನ್ ಅವರಿಗೆ ಕೇರಳದಿಂದ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ. ಈ ಮೂಲಕ ಟಾಮ್ ಅವರು ಕೇರಳದ ತ್ರಿಶೂರ್ ನಿಂದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv