ದೆಹಲಿಯಲ್ಲಿ ಕೆ.ಜಿ ಟೊಮೆಟೋಗೆ 129 ರೂ., ಯುಪಿಯಲ್ಲಿ 150 ರೂ.!

Public TV
1 Min Read
Tomato 10

ನವದೆಹಲಿ:  ದೇಶದೆಲ್ಲೆಡೆ  ತರಕಾರಿ ಬೆಲೆಯಲ್ಲಿ ಏರಿಕೆಯಾಗಿದೆ. ದೆಹಲಿಯ ಹಾಗೂ ಉತ್ತರಪ್ರದೇಶದಲ್ಲಿ ಟೊಮೆಟೋ ಬೆಲೆ (Tomato Price) ಗಗನಕ್ಕೇರಿದೆ.

ಕಡಿಮೆ ದರದಲ್ಲಿ ಸಿಗುತ್ತಿದ್ದ ಟೊಮೆಟೋ ಕಳೆದ ಕೆಲ ದಿನಗಳಿಂದ 100ರ ಗಡಿ ದಾಟುತ್ತಿದೆ. ದೆಹಲಿಯ ಸಫಲ್ ಸ್ಟೋರ್ ನಲ್ಲಿ ಕೆ.ಜಿ ಟೊಮೆಟೋ 129 ರೂ.ಗೆ ಮಾರಾಟವಾದರೆ, ಉತ್ತರಪ್ರದೇಶದಲ್ಲಿ 150 ರೂ.ಗೆ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಗ್ರಾಹಕರು ತಬ್ಬಿಬ್ಬಾಗಿದ್ದಾರೆ.

ಉತ್ತರ ಪ್ರದೇಶ ಮತ್ತು ಹರಿಯಾಣದಂತಹ ನೆರೆಯ ರಾಜ್ಯಗಳಿಂದ ಪೂರೈಕೆ ಕಡಿಮೆಯಾದ ಕಾರಣ ದೆಹಲಿಯಲ್ಲಿ ಕೆಲ ದಿನಗಳಿಂದ ಟೊಮೆಟೋ ಬೆಲೆ ದ್ವಿಗುಣಗೊಂಡಿದೆ ಎಂದು ಹೇಳಲಾಗುತ್ತಿದೆ. ಉತ್ತರಪ್ರದೇಶದಲ್ಲಿಯೂ (Uttarpradesh) ಟೊಮೆಟೋ ದರದಲ್ಲಿ ಏರಿಕೆಯಾಗಿದ್ದು, ಕೆ.ಜಿಗೆ 150 ರೂ. ಆಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.  ಇದನ್ನೂ ಓದಿ: 20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್

ಇತ್ತ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಸೇರಿದಂತೆ ಬೆಂಗಳೂರು ಸುತ್ತಮುತ್ತ ಭಾಗಗಳಲ್ಲಿ ಟೊಮೆಟೋ ಬೆಳೆ ನಾಶವಾಗಿದೆ. ಹೀಗಾಗಿ ದರದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ. ಉತ್ಪಾದನೆ ಕೊರತೆ, ತೀವ್ರವಾದ ಬಿಸಿಲು ಮತ್ತು ಮುಂಗಾರು ಆಗಮನ ವಿಳಂಬವಾಗಿದ್ದರಿಂದ ಟೊಮೆಟೋ ದರದಲ್ಲಿ ಏರಿಕೆಯಾಗಿದೆ ಎಂದು ರೈತರು ತಿಳಿಸಿದ್ದಾರೆ.

ಈ ಸಂಬಂಧ ಗ್ರಾಹಕರೊಬ್ಬರು ಪ್ರತಿಕ್ರಿಯಿಸಿ, ಟೊಮೆಟೋ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತುಂಬಾ ಕಷ್ಟವಾಗಿದೆ. ನಾವು ಟೊಮೆಟೋ ತಿನ್ನುವುದನ್ನು ನಿಲ್ಲಿಸಿದ್ದೇವೆ. ಕೆ.ಜಿ ಟೊಮೆಟೋ 129 ರೂ.ಗೆ ಮಾರಾಟವಾಗುತ್ತಿದೆ. ಈ ಬಗ್ಗೆ ಸರ್ಕಾರ ಯೋಚಿಸಬೇಕು ಎಂದು ಹೇಳಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article