ನವದೆಹಲಿ: ಪುಲ್ವಾಮಾ ಭಯಾನಕ ದಾಳಿ ಬಳಿಕ ಪಾಕಿಸ್ತಾನಕ್ಕೆ ಆರ್ಥಿಕ ಹೊಡೆತ ಬೀಳಲು ಆರಂಭವಾಗಿದೆ. ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ.
ಲಾಹೋರ್ ನಲ್ಲಿ ಒಂದು ಕಿಲೋ ಟೊಮೆಟೊ ಬೆಲೆ ಪಾಕ್ ಕರೆನ್ಸಿಯಲ್ಲಿ 180 ರೂಪಾಯಿಯ ಗಡಿ ದಾಟಿದ್ದು, ಇದರಿಂದ ಪಾಕ್ ಗ್ರಾಹಕರು ಕಂಗೆಟ್ಟು ಹೋಗಿದ್ದಾರೆ. ಇದರ ಜೊತೆಯಲ್ಲಿ ಬದನೆಕಾಯಿ, ಮೂಲಂಗಿ, ಕೋಸು, ಹಸಿ ಮೆಣಸಿನಕಾಯಿ ಮುಂತಾದ ತರಕಾರಿ ಹಾಗೂ ಕೆಲವು ಹಣ್ಣುಗಳ ಬೆಲೆಯೂ ಕೂಡ ಸಿಕ್ಕಾಪಟ್ಟೆ ಏರಿದೆ.
ನಮ್ಮ ಆಹಾರ ತಿಂದು, ನಮ್ಮ ಸೈನಿಕರ ಮೇಲೆ ದಾಳಿ ನಡೆಸುವ ಪಾಕಿಸ್ತಾನಕ್ಕೆ ನಾವು ಬೆಳೆದ ಟೊಮೆಟೋ ಪೂರೈಕೆ ಮಾಡುವುದಿಲ್ಲ. ಪಾಕಿಸ್ತಾನಕ್ಕೂ ಸಹ ಬೇರೆ ಕಡೆಯಿಂದ ತರಕಾರಿಗಳು ರಫ್ತು ಆಗಬಾರದು ಎಂದು ಮಧ್ಯಪ್ರದೇಶದ ಜಭುವಾ ಜಿಲ್ಲೆಯ ರೈತರು ಹೇಳಿದ್ದಾರೆ.
ದೆಹಲಿಯ ಅಜಾದ್‍ಪುರ ಮಂಡಿಯಿಂದ ಪಾಕಿಸ್ತಾನಕ್ಕೆ ಬಹುತೇಕ ತರಕಾರಿಗಳು ರಫ್ತಾಗುತ್ತಿತ್ತು. ಪ್ರತಿದಿನ 750- 800 ಟ್ರಕ್ ಗಳಲ್ಲಿ ಪಾಕಿಸ್ತಾನಕ್ಕೆ ತರಕಾರಿಗಳು ರಫ್ತಾಗುತಿತ್ತು. ಈಗ ಅಲ್ಲಿಂದ ಸಹ ತರಕಾರಿ ರಫ್ತಾಗುತ್ತಿಲ್ಲ. ಎಲ್ಲ ಕಡೆ ರಫ್ತು ನಿಂತ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ತರಕಾರಿಗಳ ಬೆಲೆ ಏರಿಕೆಯಾಗಿದೆ.
ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟದ ಸ್ಥಾನವನ್ನು ಭಾರತ ಹಿಂಪಡೆಯಲಾಗಿದ್ದು, ಇದರೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ರಫ್ತು ಆಗುವ ಎಲ್ಲಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಶೇ.200 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಪಾಕಿಸ್ತಾನ ಆರ್ಥಿಕತೆಗೆ ಭಾರತ ಪೆಟ್ಟು ನೀಡಿದೆ. ಅಕ್ಕಿ, ತರಕಾರಿ, ಪೀಠೋಪಕರಣಗಳು, ಸಿಮೆಂಟ್, ಚರ್ಮದ ಸರಕು, ಜವಳಿ ಬಟ್ಟೆ, ವಿದ್ಯುತ್ ವಸ್ತುಗಳು, ಶಸ್ತ್ರಚಿಕಿತ್ಸೆ ವಸ್ತುಗಳು ಸೇರಿ ಹಲವು ವಸ್ತುಗಳನ್ನು ಪಾಕಿಸ್ತಾನದಿಂದ ಭಾರತ ಆಮದು ಮಾಡಿಕೊಳ್ಳುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv