ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ ಬುಧವಾರವಾಗಿದ್ದು, ಸರ್ಕಾರದಿಂದಲೇ ಬರ್ತ್ ಡೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್‍ಡಿಕೆ, ಒಂದು ದಿನ ಮುಂಚಿತವಾಗಿಯೇ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ಆಚರಣೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಕೇಳಿಕೊಂಡಿದ್ದಾರೆ.
Advertisement
ಟ್ವೀಟ್‍ನಲ್ಲೇನಿದೆ?
ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯವಾಗಿದೆ. ನಾಳೆ ಅವರ ಹುಟ್ಟುಹಬ್ಬ. ಹೀಗಾಗಿ ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
Advertisement
ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ.
ನಾಳೆ ಅವರ ಹುಟ್ಟುಹಬ್ಬ.
ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ.
ಎಲ್ಲರೂ ಭಾಗವಹಿಸಿ.
ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು#Rajkumar pic.twitter.com/FhnCvkpReB
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 23, 2019
Advertisement
ಏ. 24ರಂದು ಜನಿಸಿದ ಡಾ. ರಾಜ್‍ಕುಮಾರ್ ಅವರು ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ ಹಾಗೂ ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರಾಗಿದ್ದಾರೆ. ಮಂಡಿನೋವು ಹಾಗು ಎದೆನೋವಿನಿಂದ ಬಳಲಿದ್ದ ಡಾ. ರಾಜ್ ಅವರು 2004 ರ ಏ.12ರ ಬುಧವಾರದಂದು ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದರು. ಬಳಿಕ ಡಾ. ರಾಜ್ ಅವರ ಸ್ವ-ಇಚ್ಛೆಯಂತೆ, ಮರಣೋತ್ತರವಾಗಿ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿತ್ತು.