ರೆಬಲ್ ಸ್ಟಾರ್ ಅಂಬರೀಶ್ ಅವರು ಹುಟ್ಟಿ ನಾಳೆಗೆ 70 ವರ್ಷ. ಅವರು ಇಂದು ನಮ್ಮೊಂದಿಗೆ ಇಲ್ಲವಾದರೂ, ಅವರ ಹೆಸರಿನಲ್ಲಿ ಸಾಕಷ್ಟು ಕೆಲಸಗಳನ್ನು ಅಂಬಿ ಕುಟುಂಬ ಮತ್ತು ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಅಂಬರೀಶ್ ಅಭಿಮಾನಿಗಳು ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
Advertisement
ಕಳೆದ ಹುಟ್ಟು ಹಬ್ಬಕ್ಕೆ ಕೋವಿಡ್ ಕಾರಣದಿಂದಾಗಿ ಅದ್ಧೂರಿಯಾಗಿ ಆಚರಿಸಲು ಆಗಿಲ್ಲ. ಕೇವಲ ಅಂಬ್ಯುಲೆನ್ಸ್ ಮತ್ತಿತರ ವಸ್ತುಗಳನ್ನು ಕೊಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದರು. ಈ ಬಾರಿ ಮಂಡ್ಯ ಮತ್ತು ಇತರ ಕಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ : ಶಾರುಖ್ ಖಾನ್ ಮನೆ ‘ಮನ್ನತ್’ ನೇಮ್ ಪ್ಲೇಟ್ ನಾಪತ್ತೆ: ಇದರ ಹಿಂದಿದೆ ಭಾರೀ ರಹಸ್ಯ
Advertisement
Advertisement
ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬಕ್ಕೆ ಚಾಲನೆ ಸಿಗಲಿದೆ. ಅಲ್ಲಿಯೇ ಅನ್ನ ಸಂತರ್ಪಣೆಯನ್ನು ಕೂಡ ಅಭಿಮಾನಿಗಳು ಮಾಡುತ್ತಿದ್ದಾರೆ. ಅಂಬರೀಶ್ ಕುಟುಂಬ ಸಮಾಧಿಗೆ ಪೂಜೆ ಸಲ್ಲಿಸಲಿದೆ. ಇದನ್ನೂ ಓದಿ : ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ
Advertisement
ಅಲ್ಲದೇ, ಅಂಬರೀಶ್ ಅವರ ನೆನಪಿನಲ್ಲಿ ಮಂಡ್ಯದಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮಧ್ಯಾಹ್ನ 2.30ಕ್ಕೆ ಡಾ. ಅಂಬರೀಶ್ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿಕರೆ ಗ್ರಾಮದಲ್ಲೂ ನಾನಾ ರೀತಿಯ ಕಾರ್ಯಕ್ರಮಗಳ ನಡೆಯಲಿದೆ. ಮಧ್ಯಾಹ್ನ 3.15ಕ್ಕೆ ಮದ್ದೂರು ತಾಲೂಕು ಅಂಬರೀಶ್ ಅಭಿಮಾನಿಗಳ ಒಕ್ಕೂಟದ ಪ್ರಧಾನ ಕಛೇರಿ ಉದ್ಘಾಟನೆ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ಮಂಡ್ಯದಲ್ಲಿ ಅಭಿಮಾನಿಗಳ ಸಂಘ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ಶ್ರವಣದೋಷವುಳ್ಳವರಿಗೆ ಉಚಿತ ಆರೋಗ್ಯ ತಪಾಸಣೆ ಇದೆ. ಇದನ್ನೂ ಓದಿ : ರಜನಿಕಾಂತ್ ನನ್ನ ವೈರಿಯಲ್ಲ ಎಂದ ಕಮಲ್ ಹಾಸನ್
ಅಲ್ಲದೇ, ಈ ಬಾರಿ ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮವನ್ನೂ ಆಯೋಜನೆ ಮಾಡಲಾಗಿದೆ. ಇಷ್ಟೂ ಕಾರ್ಯಕ್ರಮದಲ್ಲೂ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಸಿನಿಮಾ ರಂಗದ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.