BollywoodCinemaDistrictsLatestMain PostSandalwoodSouth cinema

ನಾಳೆ ರಾಮ್ ಗೋಪಾಲ್ ವರ್ಮಾ ಮತ್ತು ಉಪೇಂದ್ರ ಕಾಂಬಿನೇಷನ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಮೊನ್ನೆಯಷ್ಟೇ ರಾಮ್ ಗೋಪಾಲ್ ವರ್ಮಾ ಕನ್ನಡದ ನಟ ಉಪೇಂದ್ರ ಅವರಿಗಾಗಿ ಸಿನಿಮಾವೊಂದನ್ನು ಮಾಡುವುದಾಗಿ ಘೋಷಿಸಿದ್ದರು. ಈಗ ಆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಈ ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಲಿದೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

ಈ ಫಸ್ಟ್ ಲುಕ್ ರಿಲೀಸ್ ಕಾರ್ಯಕ್ರಮದ ವಿಶೇಷ ಅಂದರೆ, ರಾಮ್ ಗೋಪಾಲ್ ವರ್ಮಾ ಅವರು ಬಾಲಿವುಡ್ ಗೆ ಪರಿಚಯಿಸಿದ ಕನ್ನಡದ ಖ್ಯಾತ ನಟರೊಬ್ಬರು ಈ ಫಸ್ಟ್ ಲುಕ್ ಅನ್ನು ರಿಲೀಸ್ ಮಾಡಲಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ಗಣ್ಯರು ಮತ್ತು ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

ನಾಳೆ ಸಂಜೆ ಹೊಸ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಆಗಲಿದ್ದು, ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ ಈ ಚಿತ್ರದ ಮೊದಲ ನೋಟವನ್ನು ಬಿಡುಗಡೆ ಮಾಡುತ್ತಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಿ.ಕೆ. ಶಿವಕುಮಾರ್, ಮಂತ್ರಿಗಳಾದ ಮುನಿರತ್ನ, ಆರ್.ಅಶೋಕ್, ಭೈರತಿ ಬಸವರಾಜು ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಈ ಚಿತ್ರವು ಮಾಜಿ ಡಾನ್ ಮುತ್ತಪ್ಪ ರೈ ಅವರ ಬದುಕನ್ನು ಆಧರಿಸಿದ್ದು ಎನ್ನಲಾಗುತ್ತಿದೆ. ಆದರೆ, ಈವರೆಗೂ ರಾಮ್ ಗೋಪಾಲ್ ವರ್ಮಾ ಆಗಲಿ ಅಥವಾ ಉಪೇಂದ್ರವಾಗಲಿ ಎಲ್ಲಿಯೂ ಹೇಳಿಕೊಂಡಿಲ್ಲ. ಕಥೆಯು ಸಣ್ಣದೊಂದು ಸುಳಿವು ಬಿಟ್ಟುಕೊಟ್ಟಿದ್ದು ಬಿಟ್ಟರೆ, ಬಹುಶಃ ನಾಳೆ ಒಂದಷ್ಟು ಮಾಹಿತಿಯು ಸಿಗಬಹುದು.

Leave a Reply

Your email address will not be published.

Back to top button