ಬೆಂಗಳೂರು: ಬಿಜೆಪಿ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎನ್ನುವ ಮಾತುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಹಾಸನದಲ್ಲಿ ಜೆಡಿಎಸ್ ತನ್ನ ಒಗ್ಗಟ್ಟು ಪ್ರದರ್ಶಿಸಲಿದೆ.
ಹೌದು. ಶನಿವಾರ ಸಂಜೆ ಹಾಸನದಲ್ಲಿ ಜೆಡಿಎಸ್ ಶಾಸಕಾಂಗದ ಪಕ್ಷದ ಸಭೆಯನ್ನು ಮುಖ್ಯಮಂತ್ರಿ ಕರೆದಿದ್ದಾರೆ. ಜೆಡಿಎಸ್ ಶಾಸಕರು ಆಪರೇಷನ್ ಕಮಲಕ್ಕೆ ಓಳಗಾಗಲ್ಲ ಎಂದು ಒಗ್ಗಟ್ಟು ಪ್ರದರ್ಶಿಸಲು ಜೆಡಿಎಲ್‍ಪಿ ಸಭೆಯನ್ನು ಕರೆಯಲಾಗಿದೆ.
Advertisement
ಕುಮಾರಸ್ವಾಮಿ ಚಿಕ್ಕಮಗಳೂರು ಪ್ರವಾಸ ಮುಗಿಸಿ ಶನಿವಾರ ಸಂಜೆ ಹಾಸನಕ್ಕೆ ಬರಲಿದ್ದಾರೆ. ಹೀಗಾಗಿ ಇಲ್ಲೇ ಸಭೆ ನಡೆಸಿ ನಾವು ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ ಎಂದು ತೋರಿಸಲು ಈ ಸಭೆಯನ್ನು ಜೆಡಿಎಸ್ ಕರೆದಿದೆ.
Advertisement
ಸಾಧಾರಣವಾಗಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿಯ ಶಾಸಕಾಂಗ ಸಭೆ ಬೆಂಗಳೂರಿನಲ್ಲಿ ನಡೆಯುತ್ತದೆ. ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ಇದ್ದಾಗ ಬೆಳಗಾವಿಯಲ್ಲಿ ನಡೆಯುತ್ತದೆ. ಆದರೆ ಜೆಡಿಎಸ್ ಮೊದಲ ಬಾರಿಗೆ ಹಾಸನದಲ್ಲಿ ಶಾಸಕಾಂಗ ಸಭೆಯನ್ನು ಕರೆಯುವ ಮೂಲಕ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದೆ. ಇದನ್ನೂ ಓದಿ: Exclusive: ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿಯಿಂದ ತ್ರೀ ಇನ್ ಓನ್ ಗೇಮ್!
Advertisement
Advertisement
ದೆಹಲಿ ಭೇಟಿ ವೇಳೆ ಕುಮಾರಸ್ವಾಮಿ ಅವರಿಗೆ ರಾಹುಲ್ ಗಾಂಧಿ, ಯಾವುದೇ ಕಾರಣಕ್ಕೂ ಬಿಜೆಪಿಗೆ ಸರ್ಕಾರ ರಚನೆ ಮಾಡಬಾರದು. ಕಾಂಗ್ರೆಸ್ ಶಾಸಕರನ್ನು ನಾವು ನೋಡಿಕೊಳ್ಳುತ್ತೇವೆ. ಜೆಡಿಎಸ್ ಶಾಸಕರನ್ನು ನೀವು ನೋಡಿಕೊಳ್ಳಿ. ಆಪರೇಷನ್ ಕಮಲಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದ್ದರು.
ಬಿಜೆಪಿ ಸರ್ಕಾರ ರಚನೆಗೆ ಪ್ರಯತ್ನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಯಾವೊಬ್ಬ ಜೆಡಿಎಸ್ ಶಾಸಕರು ಈ ಖೆಡ್ಡಾಕ್ಕೆ ಬೀಳದೇ ಇರಲು ಕುಮಾರಸ್ವಾಮಿ ಸಭೆ ಕರೆದಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ಸೂಚನೆ ಹಿನ್ನೆಲೆಯಲ್ಲಿ ಬಹುತೇಕ ಜೆಡಿಎಸ್ ಶಾಸಕರು ಶುಕ್ರವಾರ ಸಂಜೆಯೇ ಹಾಸನ ತಲುಪುವ ಸಾಧ್ಯತೆಯಿದೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಈಗ ‘ದೋಸ್ತಿ’ಗಳಲ್ಲೇ ದಂಗೆ!
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv