ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಬಿಜೆಪಿ ಶಾಸಕರು ಬಹಿಷ್ಕರಿಸಲಿದ್ದಾರೆ. ಎಚ್‍ಡಿಕೆ ಪ್ರಮಾಣವಚನ ಸಮಾರಂಭವನ್ನು ಬಹಿಷ್ಕರಿಸುವಂತೆ ಬಿಜೆಪಿ ಹೈಕಮಾಂಡ್ ಬಿಎಸ್ ಯಡಿಯೂರಪ್ಪ ನವರಿಗೆ ಸಂದೇಶ ರವಾನಿಸಿದೆ.
ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ಸದ್ಯಕ್ಕೆ ತಟಸ್ಥವಾಗಿದ್ದುಕೊಂಡು ಎಲ್ಲವನ್ನು ನೋಡುತ್ತಿರಿ. ನಾಳೆಯ ಪ್ರಮಾಣ ವಚನ ಸಮಾರಂಭಕ್ಕೆ ಶಾಸಕರು ಗೈರಾಗಿ ಎಂದು ಸೂಚಿಸಿದೆ.
Advertisement
ಜೆಡಿಎಸ್ ಕಾಂಗ್ರೆಸ್ ಮೈತ್ರಿ ಖಂಡಿಸಿ ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕರೆ ಕೊಟ್ಟಿದೆ. ಎಲ್ಲಾ ಜಿಲ್ಲಾ ಹಾಗೂ ತಾಲೂಕಗಳಲ್ಲಿ ನಾಳೆ ಬಿಜೆಪಿ ಕರಾಳ ದಿನಾಚರಣೆಯನ್ನು ಆಚರಿಸಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನವರು ಬೆಂಗಳೂರಿನಲ್ಲಿ ಭಾಗಿಯಾಗಲಿದ್ದಾರೆ.
Advertisement
ಕರ್ನಾಟಕ ಸರ್ಕಾರದ 25ನೇ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿಯವರು ಬುಧವಾರ ಸಂಜೆ 4.30ಕ್ಕೆ ವಿಧಾನಸೌಧ ಮುಂಭಾಗ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Advertisement
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಬಿಎಸ್‍ಪಿ ನಾಯಕಿ ಮಾಯಾವತಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್, ಬಿಹಾರ ಆರ್ ಜೆ ಡಿ ನಾಯಕ ತೇಜಸ್ವಿ ಯಾದವ್ ಹಾಗೂ ಇನ್ನಿತರ ಬೇರೆ ರಾಜ್ಯದ ನಾಯಕರನ್ನು ಆಹ್ವಾನಿಸಲಾಗಿದೆ.