ನಾಳೆ ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ರಿಲೀಸ್ ಆಗುತ್ತಿದೆ. ಭಾರೀ ಪ್ರತಿಭಟನೆಯ ಮಧ್ಯಯೂ ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಹೋರಾಟಕ್ಕಿಳಿದಿವೆ. ಈ ಎಲ್ಲ ಘಟನೆಗಳ ಬೆನ್ನಲ್ಲೇ ತಮಿಳುನಾಡು (Tamil Nadu) ಸರಕಾರಕ್ಕೆ ಗುಪ್ತಚರ ಇಲಾಖೆ (Intelligence) ಮಾಹಿತಿ ನೀಡಿದೆ ಎಂದು ವರದಿಯಾಗಿದೆ.
ನಾಳೆ ತಮಿಳುನಾಡಿನಾದ್ಯಂತ ಚಿತ್ರವು ತೆರೆ ಕಾಣುವುದರಿಂದ ಕೇರಳದ ಮಾದರಿಯಲ್ಲೇ ತಮಿಳುನಾಡಿನಲ್ಲೂ ಪ್ರತಿಭಟನೆ ನಡೆಯಬಹುದು. ಹಾಗಾಗಿ ಅಲರ್ಟ್ ಆಗಿ ಇರುವಂತೆ ಸೂಚಿಸಲಾಗಿದೆಯಂತೆ. ಭಾರೀ ಪ್ರತಿಭಟನೆ ಮಾಡುವ ಸೂಚನೆಗಳು ಕೂಡ ಸಿಕ್ಕಿವೆ ಎಂದು ವರದಿ ನೀಡಿದೆಯಂತೆ. ಇದನ್ನೂ ಓದಿ:ಪವಿತ್ರಾ ಲೋಕೇಶ್- ನರೇಶ್ ‘ಮತ್ತೆ ಮದುವೆ’ ಡೇಟ್ ಫಿಕ್ಸ್
ಈಗಾಗಲೇ ವಿವಾದಕ್ಕೆ(, Controversy) ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.
ಕಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.
ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.