Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ

Chikkaballapur

ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ

Public TV
Last updated: January 4, 2022 7:21 pm
Public TV
Share
3 Min Read
DC LATHA 2
SHARE

ಚಿಕ್ಕಬಳ್ಳಾಪುರ : 15 ರಿಂದ 18 ವರ್ಷದ ಒಳಗಿನ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲು ಅವರು ಓದುತ್ತಿರುವ ಶಾಲಾ ಕಾಲೇಜುಗಳಲ್ಲಿಯೇ ನಾಳೆ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ನಿನ್ನೆ ಮತ್ತು ಇಂದು ಕೋವಿಡ್ ಲಸಿಕೆ ಪಡೆಯದೇ ಬಾಕಿ ಉಳಿದಿರುವ ವಿವಿಧ ಶಾಲಾ ಕಾಲೇಜುಗಳ 15 ವರ್ಷಕ್ಕೂ ಮೇಲ್ಪಟ್ಟ ಮಕ್ಕಳೆಲ್ಲರನ್ನು ಜನವರಿ 5 ರಂದೇ ಕೋವಿಡ್ ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಯುವ ಕೋವಿಡ್ ಲಸಿಕಾ ಮೇಳ ಆಯೋಜನೆಯ ಪೂರ್ವ ಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ಯುವ ಜನತೆಯನ್ನು ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸಿ ಕೋವಿಡ್‍ನಿಂದ ಸಂಪೂರ್ಣ ರಕ್ಷಣೆಗೆ ತರಲು ಜಿಲ್ಲೆಯಲ್ಲಿ ಲಸಿಕಾ ಮೇಳವನ್ನು ಹಮ್ಮಿಕೊಳ್ಳುವಂತೆ ನಿರ್ದೇಶಿಸಿದ್ದಾರೆ. ಅದರಂತೆ ಜಿಲ್ಲೆಯಾದ್ಯಂತ ವಿವಿಧ ಶಾಲಾ ಕಾಲೇಜುಗಳಲ್ಲಿ 70ಕ್ಕೂ ಹೆಚ್ಚು ಸತ್ರ(Sessioಟಿs)ಗಳೊಂದಿಗೆ ಜನವರಿ 5ರಂದು ಕೋವಿಡ್ ಯುವ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್‌

DC LATHA 1

40 ಸಾವಿರಕ್ಕೂ ಹೆಚ್ಚಿನ ಗುರಿ
ಜನವರಿ 3 ರಿಂದ 15 ರವರೆಗೂ 18 ವರ್ಷದ ಒಳಗಿನ ಲಸಿಕೆ ಪಡೆಯಲು ಅರ್ಹರಿರುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ. ಜಿಲ್ಲೆಯಾದ್ಯಂತ ಈ ವಯೋಮಾನದ 65,648 ಮಕ್ಕಳಿದ್ದು, ಈ ಪೈಕಿ ಜನವರಿ 3ರಂದು ಜಿಲ್ಲೆಯಾದ್ಯಂತ ಸುಮಾರು 7 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಇಂದು ಕೂಡ ಈ ಸಂಖ್ಯೆ ದ್ವಿಗುಣ ಆಗಲಿದೆ. ಇನ್ನುಳಿದ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಾಳೆಯ ಯುವ ಲಸಿಕಾ ಮೇಳದಲ್ಲಿ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮನ್ವಯತೆಯೊಂದಿಗೆ ಯೋಜನೆ ರೂಪಿಸಿಕೊಂಡು ಆರೋಗ್ಯಾಧಿಕಾರಿಗಳ ಮಟ್ಟದಲ್ಲಿ ಜಿಲ್ಲೆಯಾದ್ಯಂತ ತಂಡಗಳನ್ನು ರಚಿಸಿಕೊಂಡು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ನಾಳೆಯೇ ಲಸಿಕಾಕರಣ ಮಾಡಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಯಾರು ವಂಚಿತರಾಗಬಾರದು
ಜನವರಿ 5 ರಂದು ಶಾಲಾಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಲಾಗುವುದು. ಇನ್ನುಳಿದಂತೆ ಗೈರು ಹಾಜರಾಗುವ ಹಾಗೂ ಶಾಲೆಯಿಂದ ಹೊರಗುಳಿದಿರುವ 15 ವರ್ಷಕ್ಕೂ ಮೇಲ್ಪಟ್ಟ ಮಕ್ಕಳಿಗೂ ಸಹ ಒಂದೆರಡು ದಿನಗಳಲ್ಲಿ ಲಸಿಕೆ ನೀಡಲು ಅಧಿಕಾರಿಗಳು ಅಗತ್ಯ ಕ್ರಮ ರೂಪಿಸಿ ಲಸಿಕೆ ಹಾಕಿಸಬೇಕು ಎಂದರು. ಜಿಲ್ಲೆಯಲ್ಲಿ 15 ವರ್ಷಕ್ಕೂ ಮೇಲ್ಪಟ್ಟ ಯಾವುದೇ ಮಕ್ಕಳು ಲಸಿಕಾಕರಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯಸ್ಥರು, ಬಿಇಒಗಳು ಹೆಚ್ಚಿನ ನಿಗಾ ವಹಿಸಬೇಕು ಎಂದರು.

CORONA VACCINATION

ತ್ವರಿತವಾಗಿ ಎರಡೂ ಡೋಸ್ ಮುಗಿಸಿ
ಹದಿನೈದು ವರ್ಷಕ್ಕೂ ಮೇಲ್ಪಟ್ಟ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಗೈರು ಹಾಜರಾಗದಂತೆ ವಿದ್ಯಾರ್ಥಿಗಳ ಪೋಷಕರು ನಿಗಾ ವಹಿಸಿ ಮಕ್ಕಳಲ್ಲಿ ಧೈರ್ಯ ತುಂಬಿ ಶಾಲೆಗಳಿಗೆ ಕಳಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಪೋಷಕರಲ್ಲಿ ಮನವಿ ಮಾಡಿದರು. ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಪಡೆಯಲು ಅರಿವು ಮೂಡಿಸುವ ಜೊತೆಗೆ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಪ್ರೇರೆಪಿಸಬೇಕಾಗಿದೆ ಎಂದು ಸಲಹೆ ನೀಡಿದರು. ಇದಲ್ಲದೆ 18 ವರ್ಷಕ್ಕೂ ಮೇಲ್ಪಟ್ಟ ಅರ್ಹರೆಲ್ಲರಿಗೆ 2ನೇ ಮತ್ತು ಮೊದಲನೇ ಡೋಸ್ ಲಸಿಕಾಕರಣವೂ ಎಂದಿನಂತೆ ಮುಂದುವರಿಯಲಿದೆ. ಒಟ್ಟಾರೆ 18 ವರ್ಷಕ್ಕೂ ಮೇಲ್ಪಟ್ಟ ಅರ್ಹರೆಲ್ಲರನ್ನು ತ್ವರಿತವಾಗಿ ಎರಡೂ ಡೋಸ್‍ಗಳ ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೆಚ್ಚಿನ ನಿಗಾವಹಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

DC LATHA 3

ಮೇಳವನ್ನು ಯಶಸ್ವಿಗೊಳಿಸಿ
ಜಿಲ್ಲೆಯಲ್ಲಿ ಈವರೆಗೆ 18 ವರ್ಷಕ್ಕೂ ಮೇಲ್ಪಟ್ಟ ಜನರಿಗೆ ಲಸಿಕಾಕರಣ ಮಾಡಿದ ಮೆಗಾ ಲಸಿಕಾ ಮೇಳ, ಉತ್ಸವ ಹಾಗೂ ಅಭಿಯಾನಗಳಲ್ಲಿ ಜಿಲ್ಲೆಯ ಜನರು ಅತ್ಯುತ್ಸಾಹಿ ಸ್ಪಂದನಾಶೀಲರೂ ಎಂದು ಹೆಸರು ಪಡೆದು ಉತ್ತಮ ಸ್ಪಂದನೆ ನೀಡುವ ಮೂಲಕ ರಾಜ್ಯಮಟ್ಟದ ಪಟ್ಟಿಯಲ್ಲಿ ಹಲವು ಬಾರಿ ಪ್ರಥಮ ಸ್ಥಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಗಳಿಸಿತ್ತು. ಅದೇ ರೀತಿ 15 ವರ್ಷಕ್ಕೂ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆಯನ್ನು ಪಡೆಯುವ ಮೂಲಕ ಜನವರಿ 5ರ ಲಸಿಕಾ ಮೇಳವನ್ನು ಸಹ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಲ್ಲಿ ಕರೆ ನೀಡಿದರು.

TAGGED:ChikkaballapuraCoronavirusDistrict Collector R.Latavaccineಕೊರೊನಾ ವೈರಸ್ಚಿಕ್ಕಬಳ್ಳಾಪುರಜಿಲ್ಲಾಧಿಕಾರಿ ಆರ್.ಲತಾಲಸಿಕೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
12 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
16 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
44 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
52 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
54 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?