ಇಸ್ಲಾಮಾಬಾದ್: ಖ್ಯಾತ ಪಾಕಿಸ್ತಾನಿ ಸ್ನೂಕರ್ ಆಟಗಾರ (Pakistani Snooker Player) ಮತ್ತು ಏಷ್ಯನ್ ಅಂಡರ್-21 ಗೇಮ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮಜೀದ್ ಅಲಿ (Majid Ali) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಕಿಸ್ತಾನದ ಪಂಜಾಬ್‌ನ ಫೈಸಲಾಬಾದ್ ಬಳಿಯ ತನ್ನ ಹುಟ್ಟೂರಾದ ಸಾಮುಂದ್ರಿಯಲ್ಲಿ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಜಿದ್ (28) ಖಿನ್ನತೆಯಿಂದ ಬಳಲುತ್ತಿದ್ದರು. ಮರ ಕಡಿಯುವ ಯಂತ್ರವನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯವರ `ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ: ಪುಟಿನ್
Advertisement
Advertisement
ಮಜೀದ್ ಹಲವಾರು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಸರ್ಕ್ಯೂಟ್‌ನಲ್ಲಿ ಅಗ್ರ ಶ್ರೇಯಾಂಕದ ಆಟಗಾರರಾಗಿದ್ದರು. ಒಂದು ತಿಂಗಳ ಅವಧಿಯಲ್ಲಿ ಸಾವನ್ನಪ್ಪಿದ ಎರಡನೇ ಸ್ನೂಕರ್ ಆಟಗಾರ ಮಜೀದ್. ಕಳೆದ ತಿಂಗಳು ಮತ್ತೊಬ್ಬ ಅಂತಾರಾಷ್ಟ್ರೀಯ ಸ್ನೂಕರ್ ಆಟಗಾರ ಮುಹಮ್ಮದ್ ಬಿಲಾಲ್ ಹೃದಯ ಸ್ತಂಭನದಿಂದ ನಿಧನರಾಗಿದ್ದರು.
Advertisement
ಮಜೀದ್ ತನ್ನ ಹದಿಹರೆಯದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದರು. ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗೆ ಮಾಡಿಕೊಳ್ಳುತ್ತಾನೆ ಅಂತ ನಾವು ನಿರೀಕ್ಷಿಸಿರಲಿಲ್ಲ ಎಂದು ಮಜೀದ್ ಸಹೋದರ ಉಮರ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: 24 ವರ್ಷಗಳ ಸೇವೆಯಲ್ಲಿ ಬರೋಬ್ಬರಿ 20 ವರ್ಷ ರಜೆ ಹಾಕಿದ ಶಿಕ್ಷಕಿ ವಜಾ
Advertisement
ಪಾಕಿಸ್ತಾನ್ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಅಧ್ಯಕ್ಷ ಅಲಂಗೀರ್ ಶೇಖ್ ಅವರು ಮಜೀದ್ ಸಾವಿನಿಂದ ಇಡೀ ಸಮುದಾಯವು ದುಃಖಿತವಾಗಿದೆ. ಮಜೀದ್ ಪ್ರತಿಭಾವಂತ. ಚಿಕ್ಕ ವಯಸ್ಸಿನಲ್ಲೇ ಪಾಕಿಸ್ತಾನಕ್ಕೆ ಪ್ರಶಸ್ತಿಗಳನ್ನು ತಂದುಕೊಟ್ಟವರು ಎಂದು ನೆನಪಿಸಿಕೊಂಡಿದ್ದಾರೆ.
Web Stories