ಬೀದರ್: ರಣ ಬಿಸಿಲಿಗೆ ಹೈರಾಣಾಗಿದ್ದ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ಇಂದು ಮಳೆರಾಯ ತಂಪೆರೆದಿದ್ದು, ಅಕಾಲಿಕ ಧಾರಾಕಾರ ಮಳೆಯಿಂದ (Rain) ಗಡಿ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ಗ್ರಾಮದಲ್ಲಿ ಭಾರೀ ಬಿರುಗಾಳಿ (Storm) ಸಹಿತ ಧಾರಾಕಾರ ಮಳೆಗೆ ವಿದ್ಯುತ್ ಕಂಬ ನೆಲಕ್ಕುರುಳಿ ಅವಾಂತರ ಸೃಷ್ಠಿಯಾಗಿದೆ. ಯಾರೂ ಇಲ್ಲದ ವೇಳೆ ವಿದ್ಯುತ್ ಕಂಬ ನೆಲಕ್ಕುರುಳಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಅಲ್ಲದೇ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಇದನ್ನೂ ಓದಿ: Elvish Yadav: ‘ಬಿಗ್ ಬಾಸ್ ಹಿಂದಿ ಒಟಿಟಿ 2’ ವಿನ್ನರ್ ಬಂಧನ
Advertisement
Advertisement
ಭಾಲ್ಕಿ ತಾಲೂಕಿನ ಕೊಸಮ್ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಡಿಲು ಬಡಿದು ತೆಂಗಿನ ಮರ ಧಗಧಗ ಹೊತ್ತಿ ಉರಿದಿದ್ದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೀದರ್, ಔರಾದ್, ಕಮಲನಗರ, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಸತತ ಒಂದು ಗಂಟೆಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸಾವು – ಪಿಎಸ್‌ಐ ಸಸ್ಪೆಂಡ್
Advertisement