ತೋತಾಪುರಿ 2 ಮೊದಲ ಪೋಸ್ಟರ್ ರಿಲೀಸ್ : ಜಗ್ಗೇಶ್ ಜೊತೆ ಡಾಲಿ ಜುಗಲ್ ಬಂದಿ

Public TV
2 Min Read
Totapuri 2

ಸಿದ್ಲಿಂಗು ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಈಗಾಗಲೇ ಒಂದು ತೋತಾಪುರಿಯನ್ನು ಪ್ರೇಕ್ಷಕರಿಗೆ ತಿನ್ನಿಸಿದ್ದಾರೆ. ಮತ್ತೊಂದು ತೋತಾಪುರಿ ತಿನ್ನಿಸಲು ರೆಡಿ ಮಾಡಿಕೊಂಡಿದ್ದಾರೆ. ಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ’ ಸಿನಿಮಾ ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ತೋತಾಪುರಿ ಸಿನಿಮಾವನ್ನು ಜನರು ಮೆಚ್ಚಿಕೊಂಡ ಬೆನ್ನಲ್ಲೇ ತೋತಾಪುರಿ 2 (Totapuri 2) ಸಿನಿಮಾವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಚಾರದ ಮೊದಲ ಭಾಗವಾಗಿ ಮೊದಲ ಪೋಸ್ಟರ್ (Poster) ರಿಲೀಸ್ ಮಾಡಿದ್ದಾರೆ.

Totapuri 2 2

ಮೊನ್ನೆಯಷ್ಟೇ ಬಾಲ ಆಂಜನೇಯ, ಬಾಲ ಕೃಷ್ಣ, ಬಾಲ ಗಣಪ ಹೀಗೆ ಜೋಡಿಯ ಪೋಸ್ಟರ್ ಗಳನ್ನು ನಿರ್ಮಾಪಕ ಕೆ.ಎ ಸುರೇಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಇರುವ ಒಂದು ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ.

Totapuri Film 1

ಕೆ.ಎ.ಸುರೇಶ್ (KA Suresh) ಆರ್ಟ್ಸ್ ಬ್ಯಾನರ್ ಅಡಿಯಲ್ಲಿ  ಈ ಸಿನಿಮಾ ನಿರ್ಮಾಣಗೊಂಡಿದ್ದು, ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ (Vijay Prasad) ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ (Jaggesh), ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ.

Totapuri Film 5

ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ (Dhananjay),  ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ. ಇದನ್ನೂ ಓದಿ:18 ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ರವೀನಾ ಟಂಡನ್ ಪುತ್ರಿ

TOTAPURI 6

ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100ಕ್ಕೂ ಹೆಚ್ಚು ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

 

`ಎರಡನೇ ಮದುವೆ’, `ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ  `ತೋತಾಪುರಿ’, ‘ತೋತಾಪುರಿ 2’ ಚಿತ್ರವನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್  ಈ  ಸಿನಿಮಾವನ್ನು ಯಾವಾಗ ರಿಲೀಸ್ ಮಾಡುತ್ತಾರೋ ಕಾದು ನೋಡಬೇಕಿದೆ.

Web Stories

Share This Article