– ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಅಭಿನಂದನೆ
ಬೆಂಗಳೂರು: ಚಂದ್ರಯಾನ-3 (Chandrayaan 3) ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳ ಶಿವಶಕ್ತಿ (Shiv Shakti) ಎಂದು ಪ್ರಧಾನಿ ನರೇಂದ್ರ ಮೋದಿ ಹೆಸರಿಟ್ಟಿದ್ದಾರೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಮೋದಿ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
Advertisement
ಬೆಂಗಳೂರಿನ (Bengaluru) ಇಸ್ರೋ (ISRO) ಕಚೇರಿಯಲ್ಲಿ ಚಂದ್ರಯಾನ -3ರ ಯಶಸ್ಸಿಗೆ ಕಾರಣರಾದ ವಿಜ್ಞಾನಿಗಳನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಇದೇ ವೇಳೆ ಹೆಸರಿಸಿದ್ದಾರೆ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನುಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಮೋದಿ – ಬೆಳಗ್ಗಿನ ಜಾವದಿಂದಲೇ ಸಂಚಾರದಲ್ಲಿ ಏರುಪೇರು; ಹೇಗಿದೆ ರೂಟ್ ಮ್ಯಾಪ್?
Advertisement
Advertisement
ಚಂದ್ರಯಾನದ ಯಶಸ್ಸಿನ ಮೂಲಕ ಭಾರತ ಈಗ ಚಂದ್ರನ ಮೇಲಿದೆ. ಈ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರನ್ನು ಎಷ್ಟು ಹೊಗಳಿದರೂ ಸಾಲದು. ಅವರ ಶ್ರಮಕ್ಕೆ ನಾನು ಅಭಿನಂದಿಸುತ್ತೇನೆ ಎಂದು ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Advertisement
ಈ ಯಶಸ್ಸು ಭಾರತದ ವೈಜ್ಞಾನಿಕ ಶಂಖನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ
Web Stories