ಬಾಗಲಕೋಟೆ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಡಿ ಪ್ರವಾಸೋದ್ಯಮ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಲಮಟ್ಟಿ (Alamati), ಹರಕಲ್ (Harakal) ಗ್ರಾಮಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲ ಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯರಾಮ್ ರಾವಪುರ್ ತಿಳಿಸಿದರು.
ವಿಜಯಪುರ (Vijayapura) ಮತ್ತು ಬಾಗಲಕೋಟೆ (Bagalkot) ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯ ಯೋಜನೆ ಭೂಸ್ವಾಧೀನ ಮತ್ತು ಜಲ ಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ ಅಣೆಕಟ್ಟಿನ ಕೆಳಭಾಗದಲ್ಲಿರುವ 21 ಎಕರೆ ಜಮೀನಿನಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೀನು ಸಾಕಾಣಿಕಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಇದನ್ನೂ ಓದಿ: ನಾಲ್ಕೇ ತಿಂಗಳಿಗೆ ಪಾಕ್ ತಂಡದ ಮುಖ್ಯ ಕೋಚ್ ಹುದ್ದೆಗೆ ಗ್ಯಾರಿ ಗುಡ್ಬೈ
Advertisement
ಜಿಲ್ಲೆಯಲ್ಲಿರುವ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮ (Tourism) ಅಭಿವೃದ್ಧಿ ಪಡಿಸಿದ್ದಲ್ಲಿ ಸ್ಥಳೀಯ ಜನರಿಗೆ ವಿವಿಧ ಆರ್ಥಿಕ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ಗಮನ ಸೆಳೆದು ನೀರು ಆಧಾರಿತ ಕ್ರೀಡೆ ಅನುಭವಿಸುವ ಅವಕಾಶಗಳನ್ನು ಒದಗಿಸಿದರೆ ಪ್ರವಾಸೋದ್ಯಮ ಚಟುವಟಿಕೆಗಳು ಅಭಿವೃದ್ಧಿಯಾಗಲಿವೆ ಎಂದು ಜಯರಾಮ್ ರಾವಪುರ್ ತಿಳಿಸಿದರು.
Advertisement
Advertisement
ಈ ಪ್ರದೇಶದಲ್ಲಿ ದೋಣಿ, ನೌಕೆ ಬೋಟ್ ಯಾರ್ಡ್ಗಳು ಹಾಗೂ ಸಂಬಂಧಿತ ಉಪಕರಣಗಳ ತಯಾರಿಕೆ ಹಾಗೂ ಇತರರ ಬೆಂಬಲದೊಂದಿಗೆ ಉದ್ಯಮ ತೆರೆಯುವ ಸಾಮರ್ಥ್ಯವನ್ನು ಅಭಿವೃದ್ಧಿ ಪಡಿಸಲು ನೆರವಾಗಲಿದೆ ಎಂದರು.
Advertisement
ಸುತ್ತಮುತ್ತಲಿನ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳು ವಿಶ್ವ ಪರಂಪರೆಯ ಪಟ್ಟಿಯಲ್ಲಿದ್ದು ಜಲಮಾರ್ಗದ ಅಭಿವೃದ್ಧಿಗೆ ಮೂಲಸೌಕರ್ಯ ಒದಗಿಸಿದಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಆಕರ್ಷಿಸಿ ಸರ್ಕಾರಕ್ಕೆ ಆದಾಯ ಗಳಿಸಬಹುದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್, ಜಮೀರ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಆರ್.ಅಶೋಕ್
ಈ ಸಂದರ್ಭದಲ್ಲಿ ಕೃಷ್ಣ ಜಲ ಭಾಗ್ಯ ನಿಗಮದ ಅಧೀಕ್ಷಕ ಎಂಜಿನಿಯರ್ ಹಿರೇಗೌಡರ್ ಕಾರ್ಯನಿರ್ವಾಹಕ ಎಂಜಿನಿಯರ್ ದೊಡ್ಡಮನಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಲವಾದಿ, ಕರ್ನಾಟಕ ಜಲ ಸಾರಿಗೆ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪಾಂಡುರಂಗ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.