Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿಯನ್ನು ನೋಡಿ ಮಂತ್ರಮುಗ್ಧರಾದ ಪ್ರವಾಸಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿಯನ್ನು ನೋಡಿ ಮಂತ್ರಮುಗ್ಧರಾದ ಪ್ರವಾಸಿಗರು

Chikkamagaluru

ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿಯನ್ನು ನೋಡಿ ಮಂತ್ರಮುಗ್ಧರಾದ ಪ್ರವಾಸಿಗರು

Public TV
Last updated: November 12, 2019 9:32 am
Public TV
Share
1 Min Read
ckm beautiful falls copy
SHARE

ಚಿಕ್ಕಮಗಳೂರು: ಚಳಿಗಾಲ ಆರಂಭವಾಗಿದ್ದು, ಕಾಫಿನಾಡಿನ ಫಾಲ್ಸ್‌ಗಳಿಗೆ ಜೀವಕಳೆ ಬಂದು ಗಿರಿಯ ಪ್ರಕೃತಿ ವಿಸ್ಮಯವನ್ನು ವರ್ಣಿಸುವುದಕ್ಕೆ ಪದಗಳೇ ಸಾಲದು. ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿ ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಚಳಿಯ ಗಾಳಿಯೊಂದಿಗಿನ ಮಂಜಿನಾಟ ನೋಡುಗರಿಗೆ ರಸದೌತಣ. ಇಲ್ಲಿನ ಮನಮೋಹಕ ತಾಣಗಳಿಗೆ ಫಿದಾ ಆಗಿರುವ ಪ್ರವಾಸಿಗರಿಗೆ ಕಾಫಿನಾಡೆಂದರೆ ಪುಣ್ಯಭೂಮಿ. ಅದರಲ್ಲೂ ಈ ಬಾರಿ ನವೆಂಬರ್ ನ ಚಳಿಯಲ್ಲೂ ಕಾಫಿನಾಡಿನ ಫಾಲ್ಸ್‌ಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಮಳೆಗಾಲದಲ್ಲಿ ಮೈದುಂಬಿ ಹರಿಯುವ ಈ ಜಲಪಾತಗಳು ನವೆಂಬರ್-ಡಿಸೆಂಬರ್ ವೇಳೆಗೆ ಶಾಂತವಾಗಿರುತ್ತವೆ. ಆದರೆ ಈ ಬಾರಿ ಗಿರಿಯಲ್ಲಿನ ನಿರಂತರ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿವೆ. ಚಿಕ್ಕಮಗಳೂರಿನ ಹೊನ್ನಮ್ಮನ ಹಳ್ಳ, ಕಲ್ಲತ್ತಿಗರಿ, ಝರಿ ಫಾಲ್ಸ್‌ಗಳು ನವೆಂಬರ್ ನ ಚಳಿಯಲ್ಲೂ ನೋಡುಗರಿಗೆ ಸಿಕ್ಕಾಪಟ್ಟೆ ಕಿಕ್ ಕೊಡುತ್ತಿವೆ.

ckm beautiful falls 6 e1573531056575

ಕಾಫಿನಾಡಿನ ಗಿರಿಭಾಗದ ಯಾವುದೇ ಸ್ಥಳಕ್ಕೆ ಹೋಗಬೇಕೆಂದರೂ ಈ ಝರಿಯೇ ಜಂಕ್ಷನ್, ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಕೆಮ್ಮಣ್ಣುಗುಂಡಿಗೆ ಭೇಟಿ ನೀಡುವ ಪ್ರವಾಸಿಗರೆಲ್ಲ ಈ ಮಿನಿ ಜಲಪಾತದಲ್ಲಿ ಮಿಂದೇಳದೆ ಮುಂದೆ ಹೋಗಲ್ಲ. ಕಾಫಿನಾಡಿನ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರತಿಯೊಬ್ಬರೂ ಇಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ, ನೀರಲ್ಲಿ ಆಡಿ, ಫೋಟೋ ಶೂಟ್ ಮಾಡಿಸಿಕೊಂಡೇ ಮುಂದೆ ಹೋಗುತ್ತಾರೆ.

ckm beautiful falls 4

ಚಿಕ್ಕಮಗಳೂರಿನ ಕೈ ಮರದಿಂದ ಹೊರಟರೆ, ಹಾವು ಬಳುಕಿನ ಮೈಕಟ್ಟಿನ ರಸ್ತೆಯುದ್ದಕ್ಕೂ ಎಂಜಾಯ್ ಮಾಡುತ್ತಲೇ ಸಾಗುವ ಪ್ರವಾಸಿಗರು ಗಿರಿಭಾಗಕ್ಕೆ ಎಂಟ್ರಿ ಕೊಟ್ಟ ಕೂಡಲೇ ಹೆಜ್ಜೆ-ಹೆಜ್ಜೆಗೂ ಮಲೆನಾಡನ್ನ ಸುಖಿಸುತ್ತಾರೆ. ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿಯನ್ನು ಕಂಡು ಮೂಕವಿಸ್ಮಿತರಾಗುತ್ತಾರೆ. ನೋಡ-ನೋಡುತ್ತಿದ್ದಂತೆಯೇ ಮೋಡ ದಾರಿಯೇ ಕಾಣದಂತೆ ಕವಿದರೆ, ಕ್ಷಣಾರ್ಧದಲ್ಲಿ ತಣ್ಣಗೆ ಬೀಸುವ ಗಾಳಿ ಪ್ರವಾಸಿಗರ ಅನುಕೂಲಕ್ಕೆಂದೇ ಇದೆ ಏನೋ ಎಂದು ಅನ್ನಿಸುತ್ತೆ.

ckm beautiful falls 5 e1573531066416

ಇಲ್ಲಿನ ಗಾಳಿ ಹಾಗೂ ಮೋಡದ ನಡುವಿನ ಚೆಲ್ಲಾಟ ನೋಡುಗರಿಗೆ ಇನ್ನಷ್ಟು ಖುಷಿ ನೀಡುತ್ತಿದೆ. ಮುಗಿಲೆತ್ತರದ ಬೆಟ್ಟಗುಡ್ಡಗಳ ಮೇಲೆ ನಿಂತು ಪ್ರಕೃತಿ ಸೌಂದರ್ಯ ಸವಿಯುವುದೇ ಪ್ರವಾಸಿಗರಿಗೆ ಬಲು ಪ್ರೀತಿ. ಇಂತಹ ಸಂಪದ್ಭರಿತ ನಾಡಿಗೆ ವರ್ಷಕ್ಕೆ ಮೂರ್ನಾಲ್ಕು ಬಾರಿಯಾದರೂ ಬರಬೇಕು ಎನ್ನುವುದು ಅದೆಷ್ಟೋ ಪ್ರವಾಸಿಗರ ಆಸೆಯಾಗಿದೆ. ಕಾಫಿನಾಡಲ್ಲಿ ಇಂತಹ ಅದೆಷ್ಟೋ ನೈಸರ್ಗಿಕ ತಾಣಗಳಿವೆ. ಅವುಗಳಲ್ಲಿ ಬೆಳಕಿಗೆ ಬಂದಿರುವುದು ಒಂದೆರೆಡಾದರೆ, ಬಾರದಿರೋದು ಹತ್ತಾರು ಇವೆ.

TAGGED:ChikkamagaluruPublic TVTouristWater Fallswinterಚಳಿಗಾಲಚಿಕ್ಕಮಗಳೂರುಜಲಪಾತಪಬ್ಲಿಕ್ ಟಿವಿಪ್ರವಾಸಪ್ರವಾಸಿಗರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
22 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
43 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
53 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
1 hour ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?