ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ಕಳೆದ ಐದು ದಿನಗಳ ಹಿಂದೆ ಪ್ರವಾಸಿ ಉತ್ಸವ ನಡೆದಿತ್ತು. ಈ ವೇಳೆ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗರು ಅದರ ಎಡಗೈಯನ್ನ ಮುರಿದಿದ್ದಾರೆ.
ಪ್ರವಾಸ ಉತ್ಸವದ ಹಿನ್ನೆಲೆಯಲ್ಲಿ ಮಡಿಕೇರಿಯತ್ತ ಜನರು ತಂಡಪೋ ತಂಡವಾಗಿ ಭೇಟಿ ನೀಡಿದ್ದರು. ಇಲ್ಲಿನ ರಾಜಸೀಟಿನಲ್ಲಿ ಹೂವಿನ ಅಲಂಕಾರ ಪ್ರಾಣಿ ಪಕ್ಷಿಗಳ ಚಿತ್ತಾರ ಒಂದೆಡೆಯಾದರೆ ಗಾಂಧಿ ಒಂದೆಡೆಯಾದರೆ ಅನೇಕ ಕಾರ್ಯಕ್ರಮಗಳು ಪ್ರವಾಸಿಗರ ಮೆಚ್ಚುಗೆಗೆ ಕಾರಣವಾಗಿದ್ದವು.
Advertisement
Advertisement
ರಾಜಸೀಟ್ ನಲ್ಲಿ ಪುಲಪುಷ್ಪ ಪ್ರದರ್ಶನದಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದ್ದ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಮುಂದೆ ಜನರೆಲ್ಲ ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಪುತ್ಥಳಿಯ ಎಡಗೈ ಮುರಿದು ಕೆಳಗೆ ಬಿದ್ದಿದೆ. ಈ ಸ್ಥಿತಿಯನ್ನು ಕಂಡು ಕನ್ನಡದ ಅಭಿಮಾನಿಗಳು ಸಾಹಿತಿಗಳು ಕುವೆಂಪು ಅವರಿಗೆ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆ ಆಶ್ರಯದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರವಾಸಿ ಉತ್ಸವ ನಡೆಸಿತ್ತು. ಆಗಸ್ಟ್ ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಕಹಿ ನೆನಪಿನಿಂದ ಜಿಲ್ಲೆಯ ಜನತೆಯನ್ನು ಹೊರತರಲು ಹಾಗೂ ಕುಸಿದು ಬಿದ್ದಿರುವ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರವಾಸಿ ಉತ್ಸವವನ್ನು ಆಯೋಜಿಸಲಾಗಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv