ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ (Tourist Bus) 100 ಅಡಿ ಎತ್ತರದಿಂದ ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, 6 ವರ್ಷದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ದತ್ತಪೀಠದಲ್ಲಿ (Datta Peeta) ನಡೆದಿದೆ.
Advertisement
ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಮಿನಿ ಬಸ್ ಮಾಡಿಕೊಂಡು 23 ಜನ ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಪಶ್ಚಿಮ ಘಟ್ಟಗಳ ಸೌಂದರ್ಯ ಸವಿದು ಮಾಣಿಕ್ಯಾಧಾರ ಹೋಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ
Advertisement
Advertisement
ಮಾಣಿಕ್ಯಧಾರ ನೋಡಿಕೊಂಡು ವಾಪಸ್ ಕೆಳಗೆ ಇಳಿಯುವ ಸಂದರ್ಭ ದತ್ತಪೀಠ-ಮಾಣಿಕ್ಯಾಧಾರ ಮಧ್ಯೆ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಎತ್ತರದಿಂದ ಕೆಳಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ತೀವ್ರ ಅಸ್ವಸ್ಥನಾಗಿದ್ದ 6 ವರ್ಷದ ಬಾಲಕ ಮಹಮದ್ ನವಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ – ನೊಂದ ಮಹಿಳೆಯಿಂದ ಮಹಿಳಾ ಆಯೋಗಕ್ಕೆ ದೂರು
Advertisement