ಮಂಡ್ಯ: ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ಹಚ್ಚಹಸಿರಿನ ಮಧ್ಯೆ ಹಾಲ್ನೊರೆ ಸೂಸುತ್ತಾ ಜುಳು-ಜುಳು ಹರೀತಿದೆ ಇರ್ಪು ಫಾಲ್ಸ್
Advertisement
Advertisement
ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ. ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.
Advertisement
Advertisement
ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv