ಆನೇಕಲ್: ಸಫಾರಿಗೆ (Safari) ಹೋಗಿದ್ದ ಪ್ರವಾಸಿಗ (Tourist) ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯ ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನದಲ್ಲಿ ನಡೆದಿದೆ.
ಬೆಂಗಳೂರಿನ ನಾಗರಬಾವಿಯ ನಿವಾಸಿ ನಂಜಪ್ಪ (45) ಮೃತ ವ್ಯಕ್ತಿ. ಶನಿವಾರ ಸಫಾರಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಪತ್ನಿ ಇಬ್ಬರು ಮಕ್ಕಳೊಂದಿಗೆ ಸಫಾರಿ ವೀಕ್ಷಣೆ ಬಂದಿದ್ದ ವೇಳೆ ನಂಜಪ್ಪ ಸಫಾರಿ ಬಸ್ಸಿನಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದನ್ನೂ ಓದಿ: ಮಾನವ ಕಳ್ಳಸಾಗಣಿಕೆ ಮಾಡಿದ್ದೀಯಾ ಅಂತ ಮಹಿಳಾ ವಿಜ್ಞಾನಿಗೆ ಬೆದರಿಸಿ ಲಕ್ಷ ಲಕ್ಷ ಪೀಕಿದ ಸೈಬರ್ ವಂಚಕ
ಝೂ ಅಂಬುಲೆನ್ಸ್ ಮೂಲಕ ನಂಜಪ್ಪರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಂಜಪ್ಪ ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮನ್ ಕೀ ಬಾತ್‌ನಲ್ಲಿ ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪರನ್ನ ನೆನೆದ ಮೋದಿ

