ಶಿವಮೊಗ್ಗ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಚಾಲಕನಿಗೆ ಇದ್ದಕ್ಕಿದ್ದಂತೆ ಮೂರ್ಛೆ ರೋಗ ಕಾಣಿಸಿಕೊಂಡು, ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ನಡೆದಿದೆ.
Advertisement
ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಓರ್ವ ಪ್ರವಾಸಿಗನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಮದರಸಾಗಳಲ್ಲಿ ಓದಿದವರು ಹಿಂದೂ ವಿರೋಧಿ, ಭಯೋತ್ಪಾದಕರಾಗಿ ಬರ್ತಾರೆ – ಮುತಾಲಿಕ್ ಕಿಡಿʼ
Advertisement
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಮೂಲದ 10 ಮಂದಿ ಪ್ರವಾಸಿಗರು ಸಿಗಂದೂರು ಚೌಡೇಶ್ವರಿದೇವಿ ದರ್ಶನಕ್ಕೆ ಆಗಮಿಸಿದ್ದರು. ದರ್ಶನ ಮಾಡಿ ವಾಪಸ್ ತೆರಳುತ್ತಿದ್ದರು. ಇಲ್ಲಿನ ಕಳಸವಳ್ಳಿ ಗ್ರಾಮದ ಬಳಿ ವಾಹನ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆ ಕಾಣಿಸಿಕೊಂಡಿದೆ. ಇದರಿಂದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ
Advertisement
Advertisement
ಟಿಟಿ ವಾಹನದಲ್ಲಿದ್ದ 10 ಮಂದಿ ಪ್ರವಾಸಿಗರಲ್ಲಿ ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಬಾಬು, ಸುಚಿತ್ರಾ, ಡಿಂಪಾ, ಸಂಚಿತ, ಗುತ್ಯಮ್ಮ ಎಂದು ಗುರುತಿಸಲಾಗಿದೆ. ಅವರಿಗೆ ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.