ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದ (Kuno National Park) ಸಫಾರಿ ಝೋನ್‌ಗೆ (Safari Zone) ಎರಡು ಗಂಡು ಚೀತಾಗಳನ್ನ (Cheetah) ಬಿಡುಗಡೆಗೊಳಿಸಿದ್ದು, ಜನರಿಗೆ ಚೀತಾ ವೀಕ್ಷಣೆ ಭಾಗ್ಯ ಸಿಗಲಿದೆ.
ʻಅಗ್ನಿʼ ಮತ್ತು ʻವಾಯುʼ ಹೆಸರಿನ ಎರಡು ಗಂಡು ಚೀತಾಗಳನ್ನ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಅಹೆರಾ ಪ್ರವಾಸೋದ್ಯಮ (Tourism) ವಿಭಾಗದ ಪರೋಂಡ್ ಅರಣ್ಯ ವಲಯಕ್ಕೆ ಬಿಡಲಾಗಿದೆ. ಅರಣ್ಯ ವಿಭಾಗದ ಪಶುವೈದ್ಯರು ಈ ಎರಡೂ ಚೀತಾಗಳ ಆರೋಗ್ಯ ಉತ್ತಮವಾಗಿರುವುದನ್ನು ಖಚಿತಪಡಿಸಿದ ಬಳಿಕ ಸಫಾರಿ ಝೋನ್‌ಗೆ ಬಿಡಲಾಗಿದ್ದು, ಇದು ಪ್ರವಾಸೋದ್ಯಮ ಮತ್ತಷ್ಟು ಆಕರ್ಷಣೆ ತರಲಿದೆ. ಪ್ರವಾಸಿಗರೂ (Tourists) ಚೀತಾ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
Advertisement
Advertisement
ಡಿಸೆಂಬರ್ 21ರ ವರೆಗೂ ಕುನೋ ಅರಣ್ಯ ಉತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಚೀತಾಗಳನ್ನ ಅರಣ್ಯಕ್ಕೆ ಬಿಡುಗಡೆಗೊಳಿಸಲಾಗಿದೆ. ಇನ್ನುಳಿದ ಚೀತಾಗಳು ಕುನೋ ಆವರಣದಲ್ಲೇ ಉಳಿದಿವೆ. ತಜ್ಞರಿಂದ ಸಂಪೂರ್ಣ ಮೌಲ್ಯಮಾಪನ ಮಾಡಿದ ಬಳಿಕ ಹಂತ-ಹಂತವಾಗಿ ಬಿಡುಗಡೆ ಮಾಡಲು ಅರಣ್ಯ ಇಲಾಖೆ ಸಜ್ಜಾಗಿದೆ. ಇದನ್ನೂ ಓದಿ: ಚೀತಾ ಯೋಜನೆ ಮರುಪರಿಚಯಿಸುವ ಕಾರ್ಯಕ್ರಮದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ: ಸುಪ್ರೀಂ
Advertisement
ಚೀತಾ ಮರುಪರಿಚಯಿಸುವ ಯೋಜನೆ ಅಡಿಯಲ್ಲಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ (Namibia) ಆ ನಂತರ ದಕ್ಷಿಣ ಆಫ್ರಿಕಾದಿಂದ ತರಲಾದ 20 ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗಿತ್ತು. ಅಂದಿನಿಂದ ಅಲ್ಲಿ 4 ಮರಿಗಳು ಜನಿಸಿದ್ದವು. ಆದ್ರೆ ವಿವಿಧ ಕಾರಣಗಳಿಂದಾಗಿ ಮಾರ್ಚ್‌ನಿಂದ 6 ವಯಸ್ಕ ಚೀತಾಗಳು ಸಾವನ್ನಪ್ಪಿದ್ದವು. ಮೂರು ಮರಿಗಳು ಸೇರಿದಂತೆ ಒಟ್ಟು 9 ಚೀತಾಗಳು ಮೃತಪಟ್ಟವು. ಆ ನಂತರ ಉಳಿದ ಚೀತಾಗಳನ್ನು ಪಶುವೈದ್ಯರ ನಿಗಾದಲ್ಲಿ ಇರಿಸಲಾಗಿತ್ತು. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು – 9 ಕ್ಕೇರಿದ ಸಾವಿನ ಸಂಖ್ಯೆ
Advertisement
ಚೀತಾ ಹಿನ್ನೆಲೆ ನಿಮ್ಗೆ ಗೊತ್ತಾ?
ಮಚ್ಚೆ ಗುರುತಿನ ಚೀತಾಗಳ ಸಂತತಿ ಈಗಾಗಲೇ ಭಾರತದಲ್ಲಿ ನಾಶವಾಗಿದೆ. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 2 ರಿಂದ 6 ವರ್ಷ ವಯಸ್ಸಿನ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ ಈ ಚಿರತೆಗಳು ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ನಂತರ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಿಸಲಾಗಿತ್ತು.