ಚಿಕ್ಕಮಗಳೂರು: ಸಾಲು ಸಾಲು ರಜೆ ಹಿನ್ನೆಲೆ ಜಿಲ್ಲೆಯ (Chikkamagaluru) ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಇದರಿಂದ ಮುಳ್ಳಯ್ಯನಗಿರಿ (Mullayanagiri) ಮಾರ್ಗದಲ್ಲಿ 4-5 ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.
ಮುಳ್ಳಯ್ಯನಗಿರಿ, ದತ್ತಪೀಠ (Datta peeta), ಮಾಣಿಕ್ಯಾಧಾರ ಭಾಗಕ್ಕೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಆಯುಧಪೂಜೆ, ವಿಜಯದಶಮಿ ಹಿನ್ನೆಲೆ ಸಾಲು ಸಾಲು ರಜೆಗಳಿದ್ದು, ಪ್ರವಾಸಿಗರು ಈ ಭಾಗದ ಪ್ರವಾಸಿ ತಾಣಗಳಿಗೆ ಬಂದಿದ್ದಾರೆ. ಗಿರಿ ಭಾಗಕ್ಕೆ ನಿತ್ಯ 1200 ವಾಹನಗಳಿಗೆ ಮಾತ್ರ ಅವಕಾಶವಿದೆ. ಬೆಳಗ್ಗೆ 600, ಮಧ್ಯಾಹ್ನ 600 ವಾಹನಗಳಿಗಷ್ಟೆ ಅವಕಾಶ ನೀಡಲಾಗುತ್ತದೆ. ಇದನ್ನೂ ಓದಿ: ಚಿಕ್ಕಮಗಳೂರು | ಮದ್ಯ ಕುಡಿದು ನನ್ನ ಬಳಿ ಬರಬೇಡಿ – ವಾಹನ ಸವಾರರಿಗೆ ಯಮರಾಜನ ಎಚ್ಚರಿಕೆ!
ಈಗಾಗಲೇ ಗಿರಿ ಭಾಗಕ್ಕೆ ಸಾಕಷ್ಟು ವಾಹನಗಳು ತೆರಳಿದ್ದು, ಎನ್.ಎಂ.ಡಿ.ಸಿ.ಯಿಂದ ಕೈಮರ ಚೆಕ್ ಪೋಸ್ಟ್‌ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಮೇಲೆ ಹೋಗಿರುವ ವಾಹನಗಳು ಕೆಳಗಿಳಿದ ಮೇಲೆ ಬೇರೆ ವಾಹನಗಳಿಗೆ ಅವಕಾಶ ನೀಡಲಾಗುತ್ತದೆ. ಇದನ್ನೂ ಓದಿ: ಚಿಕ್ಕಮಗಳೂರು | ಮಲೆನಾಡಿಗರ ಸ್ಪೆಷಲ್ ಬರಗಾಪಿಗೆ ಮನಸೋತ ಪ್ರವಾಸಿಗರು!