ಬೆಳಗಾವಿ: ಮೈದುಂಬಿ ಧುಮ್ಮುಕ್ಕುತ್ತಿರುವ ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರು ಹುಚ್ಚಾಟ ಪ್ರದರ್ಶನ ಮಾಡುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಜಲಪಾತದ ತುತ್ತತುದಿಗೆ ತೆರಳಿ ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿಳ್ಳುತ್ತಿದ್ದಾರೆ.
Advertisement
ಕಳೆದ ಒಂದು ವಾರಗಳಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶ ಮತ್ತು ಬೆಳಗಾವಿಯಲ್ಲಿ ಆಗುತ್ತಿರುವ ಮಳೆಯಿಂದ ಗೋಕಾಕ್ ಜಲಪಾತ ಹಾಲಿನ ನೊರೆಯಂತೆ ಮೈದುಂಬಿ ಧುಮ್ಮುಕ್ಕುತ್ತಿದ್ದು 180 ಅಡಿ ಎತ್ತರದಿಂದ ಧುಮುಕುತ್ತಿರುವ ಜಲಧಾರೆ ನೋಡಲು ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಇದನ್ನೂ ಓದಿ: ಭಾರೀ ಮಳೆಯಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧ – ರಾಜ್ಯದ ವಿವಿಧೆಡೆ ಭೂಕುಸಿತ, ಭೂಮಿ ಕಂಪಿಸಿದ ಅನುಭವ
Advertisement
Advertisement
ಇತ್ತ ಅಪಾಯವನ್ನು ಲೆಕ್ಕಿಸದೇ ಪ್ರವಾಸಿಗರು ಜಲಪಾತದ ತುತ್ತತುದಿಗೆ ತೆರಳಿ ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿಳ್ಳುತ್ತಿದ್ದಾರೆ. ಕೆಲವರು ಜಲಪಾತದ ಮೇಲಿನ ಬಂಡೆಗಳ ಮೇಲೆ ನಿಂತು ಫೋಟೋಗೆ ಪೋಸ್ ಕೊಡುತ್ತಿದ್ದು ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟಕ್ಕೆ ಬ್ರೇಕ್ ಹಾಕುವವರೇ ಇಲ್ಲದಂತಾಗಿದೆ. ಏನಾದರೂ ಅನಾಹುತ ಸಂಭವಿಸುವ ಮೊದಲೇ ಗೋಕಾಕ್ ತಾಲೂಕಾಡಳಿತ ಎಚ್ಚೆತ್ತುಕೊಳ್ಳಬೇಕಿದೆ. ಇದನ್ನೂ ಓದಿ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದ ಕಾರು- ನೀರಿನಲ್ಲಿ ಕೊಚ್ಚಿಕೊಂಡು ಹೋಗಿರೋ ಶಂಕೆ