ಭೋಪಾಲ್: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಅಧಿಕಾರಿಗಳು ಗುರುವಾರ ನಗರದ ಖಾಸಗಿ ಮಾಲ್ಗಳಿಗೆ ದಾಳಿ ಮಾಡಿ ಸುಮಾರು 70 ಲಕ್ಷ ರೂ. ಮೌಲ್ಯದ ಐಎಸ್ಐ ಗುರುತು ಇಲ್ಲದ ಆಟಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬಿಐಎಸ್ ಹಿರಿಯ ವಿಜ್ಞಾನಿ ರಮಣ್ ತ್ರಿವೇದಿಯವರ ಮೇಲ್ವಿಚಾರಣೆಯಲ್ಲಿ ದಾಳಿ ನಡೆಸಲಾಗಿದ್ದು, ಮಾಲ್ಗಳಿಂದ ಐಎಸ್ಐ ಗುರುತು ಇಲ್ಲದ ಚೀನಾ ಆಟಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.
Advertisement
ಕೆಲವು ನಿರ್ದಿಷ್ಟ ಮಾಹಿತಿಯ ಮೇರೆಗೆ ಬಿಐಎಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮಾಲ್ಗಳಿಂದ ದೊಡ್ಡ ಪ್ರಮಾಣದ ಆಟಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಆಟಿಕೆಗಳನ್ನು ಯಾವ ದೇಶಗಳಿಂದ ಆಮದು ಮಾಡಿಕೊಳ್ಳಲಾಗಿದೆ ಮತ್ತು ಇಂತಹ ವ್ಯವಹಾರ ಯಾವಾಗಿನಿಂದ ನಡೆಯುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕೊಲ್ಲಲು ಬಂದವ್ರ ಕಣ್ಣಿಗೆ ಖಾರದ ಪುಡಿ ಎರಚಿ ಪತಿಯನ್ನು ಬಚಾವ್ ಮಾಡಿದ್ಲು!
Advertisement
Advertisement
ಐಎಸ್ಐ ಗುರುತು ಇಲ್ಲದ ಆಟಿಕೆ ನಿಷೇಧ:
ಐಎಸ್ಐ ಗುರುತು ಇಲ್ಲದ ಆಟಿಕೆಗಳನ್ನು ಮಾರಾಟ ಮಾಡುವುದನ್ನು ದೇಶದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೂ ಮಾರುಕಟ್ಟೆಗಳಲ್ಲಿ ಐಎಸ್ಐ ಗುರುತು ಇಲ್ಲದ ಆಟಿಕೆಗಳ ಮಾರಾಟ ನಡೆಯುತ್ತಿದೆ. ಇಂತಹ ಅಕ್ರಮ ಮಾರಾಟದ ಬಗ್ಗೆ ನಮಗೆ ಸಾಕಷ್ಟು ದೂರುಗಳು ಬರುತ್ತಿವೆ ಎಂದು ಅಧಿಕಾರಿ ಅಮರ್ ಉಜಾಲಾ ತಿಳಿಸಿದ್ದಾರೆ.
Advertisement
ನಾವು ಆಟಿಕೆಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ ಕಠಿಣ ಕ್ರಮ ಕೈಗೊಂಡಿದ್ದೇವೆ. ಬಿಐಎಸ್ ಅಧಿಕಾರಿಗಳು ಅಂಗಡಿಗಳನ್ನು ಸೀಲ್ ಮಾಡಿದ್ದಾರೆ. ಜೊತೆಗೆ ಚೈನೀಸ್ ಆಟಿಕೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮದ ವಿಚಾರಕ್ಕೆ ಬಂದ ಪಕ್ಕದ ಮನೆಯವರಿಗೆ ಸಲ್ಮಾನ್ ಕ್ಲಾಸ್
ಭಾರತ ಸರ್ಕಾರ ಮಾರ್ಗಸೂಚಿಗಳ ಪ್ರಕಾರ ಐಎಸ್ಐ ಗುರುತು ಇಲ್ಲದ ಆಟಿಕೆಗಳು ಮಕ್ಕಳಿಗೆ ಹಾನಿಕಾರಕ. ಅಂಗಡಿಯವರು ಇದನ್ನೆಲ್ಲ ಲೆಕ್ಕಿಸದೇ ತಮ್ಮ ಲಾಭಕ್ಕಾಗಿ ವಿದೇಶದಿಂದ ಕಡಿಮೆ ಬೆಲೆಗೆ ಆಟಿಕೆಗಳನ್ನು ಆಮದು ಮಾಡಿಕೊಂಡು ಇಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಾರೆ. ಇದೀಗ ಭೋಪಾಲ್ನಲ್ಲಿ ಬಿಐಎಸ್ ಅಧಿಕಾರಿಗಳ 13 ಸದಸ್ಯರ ತಂಡ ಹಲವೆಡೆ ದಾಳಿ ನಡೆಸುತ್ತಿದ್ದಾರೆ.