ಬಾಗಲಕೋಟೆ: ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು (ರವದಿ) ಸಾಗಿಸುತ್ತಿದ್ದ ಟ್ರ್ಯಾಕ್ಟರ್ (Tractor) ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ.
ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು ಹೋಗಿದೆ. ಬೆಂಕಿ (Fire) ಆರಿಸಲು ಸ್ಥಳೀಯರು ಹರಸಾಹಸ ಪಟ್ಟರೂ ನಿಯಂತ್ರಣ ಮಾಡಲು ಸಾಧ್ಯವಾಗದೇ ನೋಡ ನೋಡುತ್ತಿದ್ದಂತೆ ಸುಟ್ಟುಹೋಗಿದೆ. ಇದನ್ನೂ ಓದಿ: ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

