ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಚಾನಲ್‍ಗೆ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ ಇಬ್ಬರಿಗೆ ಗಂಭೀರ ಗಾಯವಾಗಿರೋ ಘಟನೆ ನಡೆದಿದೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಬಳಿ ನಡೆದಿದೆ. ಘಟನೆಯಿಂದಾಗಿ ಎಂ ಸಿ ಹಳ್ಳಿ ನಿವಾಸಿ ಬಸವರಾಜ್(46) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಶಿವಲಿಂಗ ಹಾಗೂ ತಿಮ್ಮಯ್ಯ ಎಂಬವರು ಗಾಯಗೊಂಡಿದ್ದು, ಸದ್ಯ ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
Advertisement
ಟ್ರ್ಯಾಕ್ಟರ್ ಎಂಸಿ ಹಳ್ಳಿಯಿಂದ ಚಾನಲ್ ದಾಟಿ ತೋಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್ ಪಲ್ಟಿಯಾಗುತ್ತಿದ್ದಂತೆಯೇ ಇಬ್ಬರು ಹಾರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಚಾನಲ್‍ನಲ್ಲಿ ನೀರು ಇರುತ್ತಿದ್ದರೆ ಮೂವರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ.
Advertisement
ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.