ಬಾಗಲಕೋಟೆ: ಚಲಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.
ಪ್ರಭುಲಿಂಗೇಶ್ವರ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಸ್ಥಳೀಯ ಪೊಲೀಸರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಟ್ರ್ಯಾಕ್ಟರ್ ನಲ್ಲಿದ್ದ ಕಬ್ಬಿನ ಲೋಡ್ ಬೆಂಕಿಯಿಂದ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಬಸವೇಶ್ವರ ವೃತ್ತದಲ್ಲಿ ಬಳಿ ಟ್ರ್ಯಾಕ್ಟರ್ ನಿಲ್ಲಿಸಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ
ಘಟನೆ ಕುರಿತು ಜಮಖಂಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅದು ಮೇಕೆದಾಟಲ್ಲ, ಮೇಕೆ ನಾಟಕ ಪಾದಯಾತ್ರೆ: ಮುನಿರತ್ನ