ಬೆಂಗಳೂರು: ಕೇಂದ್ರದ ಮೋದಿ ಸರ್ಕಾರ ರೈತರ ಖಾತೆಗೆ 2 ಸಾವಿರ ಹಾಕಿದ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ರೈತರಿಗೆ ಟ್ರ್ಯಾಕ್ಟರ್ ಸೇವೆ ನೀಡಲು ಚಿಂತನೆ ನಡೆಸಿದೆ. ಓಲಾ, ಉಬರ್ ಕ್ಯಾಬ್ ಮಾದರಿಯಲ್ಲಿ ರೈತರಿಗೆ ಟ್ರ್ಯಾಕ್ಟರ್ ವ್ಯವಸ್ಥೆ ಮಾಡಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೇಂಪುರ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶೇಂಪುರ, ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಾಗಿಸಲು ಓಲಾ, ಉಬರ್ ಕ್ಯಾಬ್ ಮಾದರಿಯಲ್ಲಿ ಟ್ರ್ಯಾಕ್ಟರ್ ವ್ಯವಸ್ಥೆ ಮಾಡಲಾಗುವುದು. ಹೊಲದಿಂದಲೇ ಉತ್ಪನ್ನಗಳನ್ನು ಸಾಗಿಸಲು ರೈತರು ಟ್ರ್ಯಾಕ್ಟರ್ ಬುಕ್ ಮಾಡಬಹುದುದಾಗಿದೆ. ಇನ್ಮುಂದೆ ಕೃಷಿ ಉತ್ಪನ್ನಗಳ ಖರೀದಿ ಗೋಡಾನ್‍ನಲ್ಲಿ ಆಗಲಿದ್ದು, ಇದಕ್ಕೆ ಆ್ಯಪ್ ಸಿದ್ಧ ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
Advertisement
Advertisement
ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಬೆಳೆಗಳಿಗೆ ಬೆಂಬಲ ಬೆಲೆ ತೊಂದರೆ ಆಗದಂತೆ ಲಭ್ಯ ಆಗುತ್ತಿದೆ. ಹೆಸರು, ಉದ್ದು, ಸೋಯಾ, ತೊಗರಿ ಎಲ್ಲ ಬೆಳೆಗಳಿಗೂ ಬೆಂಬಲ ಬೆಲೆ ಸಿಗುತ್ತಿದೆ. ಸರ್ಕಾರ ಸಾಲಮನ್ನಾ ಮಾಡಿ ರೈತರ ಭಾರ ಇಳಿಸಿದೆ. ಈ ಯೋಜನೆ ಚುರುಕಾಗಿ ಸಾಗುತ್ತಿದ್ದು, ಹಲವು ಯೋಜನೆಗಳ ಮೂಲಕ ರಾಜ್ಯ ಸರ್ಕಾರ ರೈತರ ಬದುಕು ಸುಭದ್ರಗೊಳಿಸಲು ಬದ್ಧವಾಗಿದೆ. ಬಡವರ ಬಂಧು ಯೋಜನೆ ಸಫಲತೆ ಹಾದಿಯಲ್ಲಿದ್ದು, ಇದುವರೆಗೂ 18 ಸಾವಿರ ಜನರಿಗೆ ಉಪಯೋಗವಾಗಿದೆ ಎಂದರು.
Advertisement
ಲೋಕಸಭಾ ಚುನಾವಣೆಯ ಸ್ಥಾನಗಳ ಹಂಚಿಕೆಯನ್ನು ಹೈಕಮಾಂಡ್ ಹಾಗು ರಾಹುಲ್ ಗಾಂಧಿ ಅವರು ನಿರ್ಧಾರ ಮಾಡುತ್ತಾರೆ. ಯಾರಿಗೆ ಎಷ್ಟು ಸೀಟು ಎಂಬುವುದು ಆ ಬಳಿಕ ತಿಳಿಯಲಿದೆ. ಸೀಟು ಹಂಚಿಕೆಯಾದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಉಂಟಾಗುವುದು ಸಹಜ. ಆದರೆ ಅದನ್ನು ಸರಿಪಡಿಸಿಕೊಳೂತ್ತೇವೆ. ಎಲ್ಲವೂ ಮಾತುಕತೆಯ ಮೂಲಕ ಸುಗಮವಾಗಿ ಹಂಚಿಕೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv