ಲಕ್ನೋ: ಮಾಘ ಪೂರ್ಣಿಮೆಯ (Magh Purnima) ಪ್ರಯುಕ್ತ ಗಂಗಾ ನದಿಯಲ್ಲಿ (Ganga River) ಪವಿತ್ರ ಸ್ನಾನ ಮಾಡಲು ಹೊರಟಿದ್ದ ಯಾತ್ರಿಕರನ್ನು (Pilgrims) ಒಳಗೊಂಡ ಟ್ರ್ಯಾಕ್ಟರ್ ಟ್ರಾಲಿ (Tractor Trolley) ಕೊಳಕ್ಕೆ ಬಿದ್ದ ಪರಿಣಾಮ 7 ಮಂದಿ ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಉತ್ತರಪ್ರದೇಶದ (Uttar Pradesh) ಕಾಸ್‌ಗಂಜ್‌ನಲ್ಲಿ (Kasganj) ನಡೆದಿದೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಾಘ ಪೂರ್ಣಿಮೆ; ಪುಣ್ಯಸ್ನಾನಕ್ಕಾಗಿ ಅಯೋಧ್ಯೆಯ ಸರಯೂ ನದಿ ತಟದಲ್ಲಿ ಜನಸಾಗರ
Advertisement
Advertisement
ಘಟನೆಯ ಕುರಿತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡ ಯಾತ್ರಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ಬೆಂಬಲಿಗರಿಗೆ ಬಾಂಬ್ ದಾಳಿ ಬೆದರಿಕೆ
Advertisement