ನವದೆಹಲಿ: ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ (Bharat Jodo Yatra) ಯಶಸ್ಸಿನ ಬಳಿಕ ಮತ್ತೊಂದು ಬೃಹತ್ ಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ (Congress) ನಾಯಕರು ಪ್ಲ್ಯಾನ್ ಮಾಡಿದ್ದು, ಇನ್ನು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಟ್ರ್ಯಾಕ್ಟರ್ ಯಾತ್ರೆ (Tractor Yatra) ಆರಂಭಿಸಲು ಸಿದ್ಧತೆಗಳು ಆರಂಭಗೊಂಡಿದೆ.
ಬುಧವಾರ ದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar), ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಈ ಬಗ್ಗೆ ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸಿದ್ದು, ಟ್ರ್ಯಾಕ್ಟರ್ ಯಾತ್ರೆ ಬಗ್ಗೆ ಚರ್ಚಿಸಿ ಅನುಮತಿ ಕೋರಿದ್ದರು. ರಾಜ್ಯ ನಾಯಕರ ಈ ಮನವಿ ಹಿರಿಯ ನಾಯಕರು ಸಮ್ಮಿತಿ ಸೂಚಿಸಿದ್ದು, ನವೆಂಬರ್‌ನಲ್ಲಿ ಯಾತ್ರೆ ಆರಂಭಗೊಳ್ಳಲಿದೆ.
Advertisement
Advertisement
ಮೂಲಗಳ ಪ್ರಕಾರ ರಾಜ್ಯದಲ್ಲಿ 2 ಟ್ರ್ಯಾಕ್ಟರ್ ಯಾತ್ರೆಗಳು ನಡೆಯಲಿದೆ. ಕಡಿಮೆ ಅವಧಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವನ್ನು ತಲುಪುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ದಕ್ಷಿಣ ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ. ಕಾರ್ಯಕ್ರಮದ ರೂಪುರೇಷೆಗಳು ಸಿದ್ಧವಾಗುತ್ತಿದ್ದು, ಶೀಘ್ರದಲ್ಲಿ ಅಧಿಕೃತ ಘೋಷಣೆಯಾಗಲಿದೆ. ಇದನ್ನೂ ಓದಿ: KPCC ಯಲ್ಲಿ ಭಿನ್ನಮತ ಸ್ಫೋಟ – ಪುಷ್ಪಾ ಅಮರನಾಥ್ ವಜಾಕ್ಕೆ ಆಗ್ರಹ
Advertisement
Advertisement
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ, ಹಣದುಬ್ಬರ, ಮೋದಿ ಸರ್ಕಾರದ ವೈಫಲ್ಯಗಳು ಮುಖ್ಯ ವಿಷಯಗಳಾಗಿರಲಿದ್ದು, ಮೇಕೆದಾಟು, ಮಹದಾಯಿ, ಕೃಷ್ಣ ಮೇಲ್ಡೆಂಡೆ ಯೋಜನೆ, 371 ಜೆ ಸೇರಿದಂತೆ ಹಲವು ಪ್ರಾದೇಶಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಯಾತ್ರೆಯನ್ನು ಜನರ ಗಮನ ಸೆಳೆಯಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸಿದ್ದಾರೆ. ಇದನ್ನೂ ಓದಿ: 2023ರ ವೇಳೆಗೆ ಚೀನಾ, ಪಾಕಿಸ್ತಾನಕ್ಕಿಂತ ಉತ್ತಮ ಸಂಬಳ ಹೆಚ್ಚಳಕ್ಕೆ ಸಾಕ್ಷಿಯಾಗಲಿದೆ ಭಾರತ