ನವದೆಹಲಿ: ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರದಿಂದ ಭಾರತಕ್ಕೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಹೇಳಿದ್ದಾರೆ.
ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರಗಳ ನಡುವೆ ಮಧ್ಯೆ ಆಮದು ಮತ್ತು ರಫ್ತು ಸಮಸ್ಯೆ ಸೃಷ್ಟಿಯಾಗಿದೆ. ಅಮೆರಿಕ ಚೀನಾದ ಉತ್ಪನ್ನಗಳ ಮೇಲೆ ಆಮದು ಸುಂಕ ಹೆಚ್ಚಿಗೆ ಹಾಕಿದರೆ ಇತ್ತ ಚೀನಾವು ಅಮೆರಿಕದ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿದೆ. ಇದರಿಂದಾಗಿ ಅಮೆರಿಕ ಮತ್ತು ವಿಶ್ವದ ಮಾರುಕಟ್ಟೆಯಲ್ಲಿ ಭಾರತದ ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದಿದ್ದಾರೆ.
Advertisement
ವಾಹನ ಮತ್ತು ಬಿಡಿಭಾಗಗಳು, ಎಲೆಕ್ಟ್ರಾನಿಕ್ ಉತ್ಪನ್ನ, ಯಂತ್ರೋಪಕರಣ, ಪ್ಲಾಸ್ಟಿಕ್, ಕೆಮಿಕಲ್, ಮತ್ತು ರಬ್ಬರ್ ಉತ್ಪನ್ನಗಳು ಈಗ ಅಮೆರಿಕ ಮಾರುಕಟ್ಟೆಯಲ್ಲಿ ಸ್ಪರ್ಧೆ ನೀಡುವ ಜೊತೆಗೆ ಬೇಡಿಕೆಯನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.
Advertisement
ತೈಲ ಬೆಲೆ ಏರಿಕೆ ಮತ್ತು ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಭಾರತದ ಆರ್ಥಿಕತೆ ಸವಾಲಾಗಿದೆ. ಆದರೆ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಸಮರದಿಂದ ಭಾರತ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಿದೆ ಎಂದು ಹೇಳಿದರು.
Advertisement
Addressed via videoconference "Let's Walk our Talk: India@2022", a programme organised by the PHD Chambers of Commerce and Industry, September 28, 2018 pic.twitter.com/qm6SkMMOn3
— Arun Jaitley (@arunjaitley) September 28, 2018
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publict