ಬೆಂಗಳೂರು: ಹಿಟ್ ಅಂಡ್ ರನ್ಗೆ ಟ್ರಾಫಿಕ್ ಹೆಡ್ ಕಾನ್ಸ್ ಸ್ಟೇಬಲ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆದು ಮುಖ್ಯಪೇದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Advertisement
ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಮುಖ್ಯ ಪೇದೆಯಾಗಿದ್ದ ರವಿಶಂಕರ್ ಮೃತ ದುರ್ದೈವಿ. ದೇವೇಗೌಡ ಸರ್ಕಲ್ ಬಳಿ ನಿಯೋಜನೆಗೊಂಡಿದ್ದ ರವಿಶಂಕರ್ ಅವರಿಗೆ ಇಂದು ಲಾರಿ ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಅವರು ಅಲ್ಲೇ ಜೀವ ಬಿಟ್ಟಿದ್ದಾರೆ. ಇವರ ಜೊತೆಗಿದ್ದ ಹೋಂ ಗಾರ್ಡ್ ವೆಂಕೂಬ್ ರಾವ್ ಗಾಯಗೊಂಡಿದ್ದಾರೆ.
Advertisement
Advertisement
ಬ್ಯಾಟರಾಯನಪುರ ಸಂಚಾರಿ ಠಾಣೆ ಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.