ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗಬೇಕು ಸೂರ್ಯೋದಯ ನೋಡಬೇಕು ಅಂತ ಕಾರು ಹಾಗೂ ಬೈಕ್‍ಗಳಲ್ಲಿ ಬಂದ ಪ್ರವಾಸಿಗರು ನಂದಿಬೆಟ್ಟದ ಕ್ರಾಸ್‍ನಲ್ಲಿಯೇ ಉಳಿಯುವಂತಾಯಿತು. ಅತ್ತ ನಂದಿಬೆಟ್ಟಕ್ಕೂ ಹೋಗಲಾಗದೇ ಇತ್ತ ವಾಪಾಸ್ಸು ಬರಲಾಗದೇ ಗಂಟೆಗಟ್ಟಲೇ ರೋಡ್‍ನಲ್ಲಿಯೇ ಕಾಲ ಕಳೆಯುವಂತಾಗಿದೆ. ಗಂಟೆಗಟ್ಟಲೇ ಕಾದು-ಕಾದು ಕೆಲವರು ನಂದಿಬೆಟ್ಟಕ್ಕೆ ಹೋದರೆ ಬಹುತೇಕರು ಅಯ್ಯೋ ಸಾಕಪ್ಪ ಸಾಕು ನಂದಿಬೆಟ್ಟದ ಸಹವಾಸ ಅಂತ ವಾಪಾಸ್ಸಾಗುವಂತಾಯಿತು.
Advertisement
ಭಾನುವಾರ ಬೆಂಗಳೂರಿಗರ ಪಿಕ್ನಿಕ್ ಸ್ಪಾಟ್, ಪ್ರವಾಸಿಗರ ಹಾಟ್ ಫೆವರೇಟ್ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡೇ ಹರಿದುಬಂದಿತ್ತು. ಕಾರು ಹಾಗೂ ಬೈಕ್‍ಗಳಲ್ಲಿ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿದ್ದರು. ಆದರೆ ನೀರಿಕ್ಷೆಗೂ ಮೀರಿ ನಂದಿಬೆಟ್ಟಕ್ಕೆ ಪ್ರವಾಸಿಗರು ಬಂದ ಕಾರಣ ನಂದಿಬೆಟ್ಟದ ಚೆಕ್ ಪೋಸ್ಟ್‍ನಿಂದ ನಂದಿಬೆಟ್ಟದ ಕ್ರಾಸ್, ದೊಡ್ಡಬಳ್ಳಾಪುರ ಮಾರ್ಗದ ಕಣಿವೆಪುರ ಗ್ರಾಮದವದರೆಗೂ ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗಿ ಸೂರ್ಯೋದಯ ನೋಡಬೇಕು ಅಂತ ಬಂದ ಪ್ರವಾಸಿಗರಿಗೆ ನಿರಾಸೆಯಾಯಿತು. ಇದನ್ನೂ ಓದಿ: ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ನಿರ್ದೇಶಕ ಶಶಾಂಕ್ ಹೊಸ ಚಿತ್ರ ಅನೌನ್ಸ್
Advertisement
Advertisement
ಬೆಳಿಗ್ಗೆ 4-5 ಗಂಟೆಗೆ ನಂದಿಬೆಟ್ಟದತ್ತ ಬಂದವರಿಗೆ ಚೆಕ್ ಪೋಸ್ಟ್ ಬಳಿ ತಡೆ ಒಡ್ಡಲಾಗುತ್ತದೆ. 6 ಗಂಟೆ ನಂತರವೇ ನಂದಿಬೆಟ್ಟದ ಚೆಕ್ ಪೋಸ್ಟ್ ಬಳಿ ಗೇಟ್ ಓಪನ್ ಮಾಡಲಾಗುತ್ತದೆ. ಈ ನಡುವೆ ನಂದಿಬೆಟ್ಟದ ಮೇಲ್ಭಾಗದಲ್ಲಿ ಪಾರ್ಕಿಂಗ್ ಸಮಸ್ಯೆ ಇರುವ ಕಾರಣ ಮೊದಲು ಬಂದ 300 ನಾಲ್ಕು ಚಕ್ರ ವಾಹನ ಹಾಗೂ 100 ಬೈಕ್‍ಗಳಿಗಷ್ಟೇ ನಂದಿಬೆಟ್ಟದ ಮೇಲ್ಭಾಗಕ್ಕೆ ತೆರಳಲು ಅವಕಾಶ ನೀಡಲಾಗುತ್ತದೆ. ಮೇಲಿಂದ ಒಂದು ವಾಹನ ವಾಪಾಸ್ಸು ಬಂದರೆ ಮತ್ತೊಂದು ವಾಹನವನ್ನು ಮೇಲ್ಭಾಗಕ್ಕೆ ಬಿಡಲಾಗುತ್ತದೆ. ಹೀಗಾಗಿ ಸೀಮಿತ 300 ವಾಹನಗಳನ್ನು ಮೀರಿ ನೂರಾರು ಕಾರುಗಳ ಬಂದ ಕಾರಣ ನಿಂತಲ್ಲೇ ಕಾರುಗಳು ನಿಲ್ಲುವಂತಾಯಿತು. ಅತ್ತ ನಂದಿಬೆಟ್ಟಕ್ಕೂ ಹೋಗಲಾಗದೆ ಇತ್ತ ವಾಪಾಸ್ಸು ಬರಲಾಗದೆ ಪ್ರವಾಸಿಗರು ಪರದಾಡಿದರು. ಇದನ್ನೂ ಓದಿ: ಯಶ್ ಮುಂದಿನ ಸಿನಿಮಾಗೆ ಕರಾವಳಿ ಸುಂದರಿ ಜೋಡಿ