ಮೈಸೂರು: ವಾಹನ ತಪಾಸಣೆ ವೇಳೆ ಸಂಚಾರಿ ಪೊಲೀಸರಿಂದ ಬ್ಯಾರಿಕೇಡ್ ಎಳೆದ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ಕೆಳಗೆ ಬಿದ್ದು, ಕೈ ಮೇಲೆ ಟಿಪ್ಪರ್ ಹರಿದಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.
ಮೈಸೂರಿನ ಆರ್‌ಎಂಸಿ ವೃತ್ತದಲ್ಲಿ ಈ ಘಟನೆ ನಡೆದಿದೆ. ದೇವೇಗೌಡ ಸರ್ಕಲ್ ಕಡೆಯಿಂದ ಆರ್‌ಎಂಸಿ ವೃತ್ತದ ಕಡೆಗೆ ಬೈಕ್ ಬೈಕ್ ಹೋಗುತ್ತಿತ್ತು. ಬೈಕ್‌ನಲ್ಲಿ ಹೋಗುತ್ತಿದ್ದ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಮೆಕ್ಸಿಕೊದಲ್ಲಿ ಟ್ರಕ್ ಅಪಘಾತಕ್ಕೆ 10 ವಲಸಿಗರು ಬಲಿ
Advertisement
Advertisement
ಹೆಲ್ಮೆಟ್ ಧರಿಸದ್ದಕ್ಕೆ ಪೊಲೀಸರು ತಡೆಯಲು ಮುಂದಾಗಿದ್ದಾರೆ. ಈ ವೇಳೆ ರಸ್ತೆಗೆ ಬ್ಯಾರಿಕೇಡ್ ಎಳೆದಿದ್ದಾರೆ. ಈ ವೇಳೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆಗ ಅವರ ಎಡಗೈ ಮೇಲೆ ಟಿಪ್ಪರ್ ಚಕ್ರ ಹರಿದಿದೆ.
Advertisement
ಘಟನೆಯಲ್ಲಿ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಸಂಚಾರಿ ಪೊಲೀಸರ ನಡೆಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳಲಾರದೇ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Advertisement
2021 ರಲ್ಲೂ ಇದೇ ರೀತಿಯ ಅವಘಡ ನಡೆದಿತ್ತು. ಸಂಚಾರಿ ಪೊಲೀಸರ ತಪಾಸಣೆ ವೇಳೆ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಸಾರ್ವಜನಿಕರು ಪೊಲೀಸರಿಗೆ ಬಟ್ಟೆ ಹರಿದು ಥಳಿಸಿದ್ದರು. ಮೈಸೂರಿನ ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
Web Stories