ಬೆಂಗಳೂರು: ಹೊಸ ಟ್ರಾಫಿಟ್ ದಂಡ ಜಾರಿಯಿಂದಾಗಿ ವಾಹನ ಸವಾರರು ಶಾಕ್‍ಗೆ ಒಳಗಾಗಿದ್ದಾರೆ. ಸವಾರರು ಬೈಕ್‍ಗಳನ್ನು ಮನೆಯಿಂದ ಹೊರಗೆ ತರುವುದಕ್ಕೂ ಹಿಂದೇಟು ಹಾಕುವಂತಾಗಿದೆ. ಈ ಬೆನ್ನಲ್ಲೇ ಸಂಚಾರ ನಿಯಮವೊಂದು ಸವಾರರು ಬೆಚ್ಚಿ ಬೀಳುವಂತೆ ಮಾಡಿದೆ.
ಸವಾರರು ಸ್ಲಿಪ್ಪರ್, ಹವಾಯಿ ಚಪ್ಪಲ್ ಹಾಕಿಕೊಂಡು ಗೇರ್ ಹೊಂದಿರುವ ದ್ವಿಚಕ್ರ ವಾಹನ ಓಡಿಸುವಂತಿಲ್ಲ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡಕ್ಕೆ ಗುರಿಯಾಗಬೇಕಾಗುತ್ತದೆ. ದಂಡದ ಮೊತ್ತವು 1,000 ರೂ. ಆಗಿದ್ದು, ಈ ತಪ್ಪು ಮರುಕಳಿಸಿದರೆ ದಂಡದ ಜೊತೆಗೆ 15 ದಿನಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘಿಸಿ 86,500 ರೂ. ದಂಡ ತೆತ್ತ ಲಾರಿ ಚಾಲಕ
Advertisement
Advertisement
ಸ್ಲಿಪ್ಪರ್, ಹವಾಯಿ ಚಪ್ಪಲಿ ಹಾಕಿದರೆ ದ್ವಿಚಕ್ರ ವಾಹನದ ಗೇರ್ ಬದಲಾಯಿಸಲು, ವಾಹನ ನಿಯಂತ್ರಣಕ್ಕೆ, ಪಾರ್ಕ್ ಮಾಡಲು, ಪಾರ್ಕಿಂಗ್‍ನಿಂದ ವಾಹನ ತೆಗೆಯಲು ಸಮಸ್ಯೆ ಆಗಲಿದೆ. ಜೊತೆಗೆ ಅಪಘಾತದವಾದಾಗ ಕಾಲಿಗೆ ಗಾಯವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಸವಾರರು ಶೂ ಧರಿಸಿದರೆ ಉತ್ತಮ ಎಂಬುದು ನಿಯಮದ ಉದ್ದೇಶವಾಗಿದೆ. 1988ರ ಮೋಟಾರು ವಾಹನ ಕಾಯ್ದೆಯಲ್ಲೇ ಇದನ್ನು ಉಲ್ಲೇಖಿಸಲಾಗಿದೆ. ಇಲ್ಲಿಯವರೆಗೆ ಈ ನಿಯಮವನ್ನು ಗಂಭೀರವಾಗಿ ಟ್ರಾಫಿಕ್ ಪೊಲೀಸರು ಗಮನಿಸುತ್ತಿರಲಿಲ್ಲ. ಆದರೆ ಈಗ ದೇಶದ ವಿವಿಧ ಕಡೆಗಳಲ್ಲಿ ಈ ನಿಯಮವನ್ನು ಪಾಲಿಸಲು ಮುಂದಾಗಿದ್ದು ಹಲವು ನಗರಗಳಲ್ಲಿ ಸವಾರರು ಈ ಪ್ರಕರಣದ ಅಡಿ ದಂಡ ಪಾವತಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ವಾಹನ ಚಾಲಕನಿಗೂ ಬಿತ್ತು 1 ಸಾವಿರ ರೂ. ದಂಡ
Advertisement
ಹೊಸ ಟ್ರಾಫಿಟ್ ದಂಡ ಜಾರಿಯಾದ ಬಳಿಕ ಟ್ರಾಫಿಕ್ ಪೊಲೀಸರು ಕೂಡ ಫುಲ್ ಆ್ಯಕ್ಟೀವ್ ಆಗಿದ್ದು, ಲೈಸನ್ಸ್, ಹೆಲ್ಮೆಟ್, ಲೈಸನ್ಸ್ ಸೇರಿ ಎಲ್ಲ ರೀತಿಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಹೀಗಾಗಿ ದಂಡದ ಮೊತ್ತವು ಭಾರೀ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದೆ.
Advertisement