ನೆಲಮಂಗಲ: ಗರ್ಭಿಣಿ ಫೋಟೊ ಶೂಟ್ (Maternity Photoshoot) ವೇಳೆ ಆಟವಾಡುತ್ತಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ.
ಸಾವನ್ನಪ್ಪಿದ ಮಗುವನ್ನು ಲಕ್ಷ್ಮೀರ್ (3) ಸಾವನ್ನಪ್ಪಿದ ಮಗು ಎಂದು ತಿಳಿದು ಬಂದಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ನೀರಿನ ತೊಟ್ಟಿಗೆ ಬಿದ್ದು ಮೊದಲ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ – ಮನೆ ಗೋಡೆ ಛಿದ್ರ
ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರಗೆ ರವಾನಿಸಲಾಗಿದೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

