ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆಯ (Magadi Road) ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಉತ್ತರ ಪ್ರದೇಶ ಮೂಲದ ಉದಯ್ ಬಾನು (40) ಹಾಗೂ ಬಿಹಾರ ಮೂಲದ ರೋಶನ್ (23) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಚುರುಕು ಮೂವರು ಆರೋಪಿಗಳಿಗೆ ನೋಟಿಸ್
Advertisement
Advertisement
ಸತೀಶ್ ಎನ್ನುವವರಿಗೆ ಸೇರಿದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಬಿಲ್ಡಿಂಗ್‌ನಲ್ಲಿ ವುಡ್ ವರ್ಕ್ಸ್ ಮಾಡಲಾಗಿತ್ತು. ಈ ವೇಳೆ ಕೆಲಸಗಾರರ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಬಿದ್ದು, ಧಗಧಗನೆ ಹೊತ್ತಿ ಉರಿದ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ.
Advertisement
ಕಟ್ಟಡದಲ್ಲಿ ಒಟ್ಟು ಆರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನುಳಿದ ಇಬ್ಬರು ಕಾರ್ಮಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದು, ಸದ್ಯ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಅಧಿಪತ್ರದ ವಿಲಕ್ಷಣ ಪಾತ್ರಧಾರಿ ಎಂ.ಕೆ ಮಠ!