ರಾಯಚೂರು: ಜಿಲ್ಲೆಯ ಸಿಂಧನೂರು (Sindhanuru) ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತಪಟ್ಟ ರೈತನನ್ನು ದ್ಯಾವಪ್ಪ (35) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ
ರಾಮಕೃಷ್ಣ ಎಂಬುವವರ ಜಮೀನಿನಲ್ಲಿ ಜೋಳ ಬಿತ್ತನೆ ಕೆಲಸಕ್ಕಾಗಿ ಮೂವರು ರೈತರು ಹೋಗಿದ್ದರು. ಈ ವೇಳೆ ಮಳೆ ಬಂದಿದ್ದು, ಮೂವರು ಮರದ ಕೆಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದಿದ್ದು, ಪರಿಣಾಮ ರೈತ ದ್ಯಾವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಯ್ಯಪ್ಪ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.
ಇನ್ನೋರ್ವ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳು ಅಯ್ಯಪ್ಪ ಅವರನ್ನು ಚಿಕಿತ್ಸೆಗಾಗಿ ಸಿಂಧನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.ಇದನ್ನೂ ಓದಿ: ತಾಂತ್ರಿಕ ದೋಷ: ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಲಂಡನ್ಗೆ ವಾಪಸ್

