ಮಂಡ್ಯ: ಸೋಮವಾರದಿಂದ ಕೆಆರ್‌ಎಸ್ ಸುತ್ತಮುತ್ತ ಗಣಿಗಾರಿಕೆ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯರಲ್ಲಿ ಆತಂಕ ಎದುರಾಗಿದೆ.
ಕೆಆರ್‌ಎಸ್‌ನ 20 ಕಿ.ಮೀ. ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯಲಿದೆ. ಜಾರ್ಖಂಡ್ ಮೂಲದ ಭೂ ವಿಜ್ಞಾನಿಗಳ ತಂಡದಿಂದ ಬೇಬಿ ಬೆಟ್ಟ ಸೇರಿದಂತೆ ಐದು ಕಡೆ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಸಂಚಾರ ದಟ್ಟಣೆ ತಡೆಗೆ ಟ್ರಾಫಿಕ್ ಡೈವರ್ಟ್- ವರ್ಕೌಟ್ ಆಗ್ತಿಲ್ಲ ಅಂತಿದ್ದಾರೆ ಸವಾರರು!
ರೈತರ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಯುತ್ತಿದ್ದು, ಇದನ್ನು ವಿರೋಧಿಸಿ ನಾಳೆ ರೈತರಿಂದ ಬೈಕ್ Rally ಕೂಡ ನಡೆಯಲಿದೆ. ಕೆಆರ್‌ಎಸ್‌ನಿಂದ ಟ್ರಯಲ್ ಬ್ಲಾಸ್ಟ್ ನಡೆಯುವ ಸ್ಥಳದ ವರೆಗೆ ಬೈಕ್ Rally ನಡೆಯಲಿದ್ದು, ಬಳಿಕ ಟ್ರಯಲ್ ಬ್ಲಾಸ್ಟಿಂಗ್ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗಿದೆ.
ಟ್ರಯಲ್ ಬ್ಲಾಸ್ಟ್ ನಡೆಸದಂತೆ ಪ್ರತಿಭಟನೆ ನಡೆಸಲಾಗುತ್ತದೆ. ಪ್ರತಿಭಟನೆಯಲ್ಲಿ ರೈತ ಸಂಘಟನೆ, ಪ್ರಗತಿಪರ ಸಂಘಟನೆ, ಕಾರ್ಮಿಕ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಲಿವೆ. 2018 ರಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಬಂದಿದ್ದ ವೇಳೆ ರೈತರು ಗೋ ಬ್ಯಾಕ್ ಚಳುವಳಿ ನಡೆಸಿದ್ದರು. ಆ ವೇಳೆ ಚಳುವಳಿಗೆ ಸೋತು ಅಧಿಕಾರಿಗಳು ಜಾಗ ಖಾಲಿ ಮಾಡಿದ್ದರು.