ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ

Public TV
2 Min Read
ATS

ಚಿಕ್ಕೋಡಿ: ಕರ್ನಾಟಕದಿಂದ (Karnataka) 70 ಕಿಲೋಮೀಟರ್ ದೂರದಲ್ಲಿರುವ ಮಹಾರಾಷ್ಟ್ರದ (Maharashtra) ಅರಣ್ಯದಲ್ಲಿ ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದ ಶಂಕೆಯ ಮೇರೆಗೆ ಇಬ್ಬರು ಶಂಕಿತ ಉಗ್ರರನ್ನು (Suspected Terrorists) ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅಂಬೋಲಿ (Amboli) ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ದೊರೆತಿದ್ದು, ಶಂಕಿತ ಉಗ್ರರು ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಅಂಬೋಲಿಗೆ ಪ್ರಯಾಣ ಬೆಳೆಸಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆ ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರಕ್ಕೆ ಆಗಮಿಸಿ ಎಟಿಎಸ್ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ

ಕಳೆದ ವಾರ ಪಟ್ರೋಲಿಂಗ್ (Patrolling) ಮಾಡುತ್ತಿದ್ದ ವೇಳೆ ಬೈಕ್ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ಪುಣೆ ಕೊಥ್‌ರೂಡ್ ಪೊಲೀಸರು ವಶಕ್ಕೆ ಪಡೆದಿದ್ದರು. ಬೈಕ್ ಕಳ್ಳತನ ಶಂಕೆಯಡಿಯಲ್ಲಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್ ಹಮೀದ್ ಖಾನ್ ಮತ್ತು ಮೊಹಮ್ಮದ್ ಯೂನಿಸ್ ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳಿಗೆ ಐಸಿಸ್ ಉಗ್ರ ಸಂಘಟನೆ ಜೊತೆ ನಂಟಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

ಬಳಿಕ ಇಬ್ಬರು ಶಂಕಿತ ಉಗ್ರರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ಬಹಿರಂಗವಾಗಿದೆ. ಕೊಲ್ಲಾಪುರ ನಿಪ್ಪಾಣಿ ಆಜರಾ ಮಾರ್ಗವಾಗಿ ಅಂಬೋಲಿಗೆ ಪ್ರಯಾಣಿಸಿದ ಮಾಹಿತಿ ದೊರೆತ ಹಿನ್ನೆಲೆ ಶಂಕಿತ ಉಗ್ರರು ಪ್ರಯಾಣಿಸಿದ ಮಾರ್ಗವನ್ನು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಜುಲೈ 27ರಂದು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಮಾಹಿತಿ ದೊರೆತಿದ್ದು, ಈ ಬಗ್ಗೆ ಬೆಳಗಾವಿ ಪೊಲೀಸರು ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ. ಇದನ್ನೂ ಓದಿ: ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ -‌ ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ!

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article