ಚಂಡೀಗಢ: ಪಂಜಾಬ್‌ನಲ್ಲಿ (Punjab) ಸಿರ್ಹಿಂದ್‌ನ ಮಾಧೋಪುರ ಬಳಿ ಭಾನುವಾರ ಬೆಳಗ್ಗೆ ಎರಡು ಸರಕು ರೈಲುಗಳು ಪರಸ್ಪರ ಡಿಕ್ಕಿಯಾಗಿ (Train Collision) ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ಪೈಲಟ್‌ಗಳನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರಿ ರೈಲ್ವೇ ಪೊಲೀಸ್ ಅಧಿಕಾರಿ, ಭಾನುವಾರ ಬೆಳಗ್ಗೆ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಹಿಂದಿನಿಂದ ಮತ್ತೊಂದು ರೈಲು ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ
- Advertisement
ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಗಾಯಗೊಂಡಿರುವ ಲೋಕೋ ಪೈಲಟ್‌ಗಳನ್ನು ವಿಕಾಸ್ ಕುಮಾರ್ ಮತ್ತು ಹಿಮಾಂಶು ಕುಮಾರ್ ಎಂದು ಗುರುತಿಸಲಾಗಿದೆ.
- Advertisement
ವಿಕಾಸ್ ಕುಮಾರ್ ಅವರ ತಲೆಗೆ ಮತ್ತು ಹಿಮಾಂಶು ಕುಮಾರ್ ಅವರ ಬೆನ್ನಿಗೆ ಗಾಯಗಳಾಗಿವೆ ಎಂದು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿಗೆ ವಾಪಸ್