ಬೆಳಗಾವಿ: ವಾಸ್ಕೋದಿಂದ ಬಳ್ಳಾರಿಗೆ (Ballary) ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲಿನ (Goods Train) ವ್ಯಾಗನ್ ಗುರುವಾರ ಮಧ್ಯಾಹ್ನ ದೂದ್ ಸಾಗರ್ (Dudhsagar) ಬಳಿ ಹಳಿತಪ್ಪಿದ್ದು, ಕೆಲವು ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲವೊಂದನ್ನು ಸ್ಥಗಿತಗೊಳಿಸಲಾಗಿದೆ.
ಹುಬ್ಬಳ್ಳಿ ವಿಭಾಗದ ಸೋನಾಲಿಯಂ ಮತ್ತು ದೂದ್ ಸಾಗರ ನಿಲ್ದಾಣಗಳ ನಡುವೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೂಡ್ಸ್ ರೈಲಿನ ವ್ಯಾಗನ್ ಹಳಿತಪ್ಪಿದೆ.ಇದನ್ನೂ ಓದಿ: ಪತಿಯಿಂದಲೇ ಮಿಸ್ ಸ್ವಿಜರ್ಲೆಂಡ್ ಹತ್ಯೆ: ಕೊಲೆ ಬಳಿಕ ಬ್ಲೆಂಡರ್ ಬಳಸಿ ಮೃತದೇಹ ಪೀಸ್ ಪೀಸ್
Advertisement
Advertisement
ಈ ಘಟನೆಯಿಂದಾಗಿ ಮಧ್ಯಾಹ್ನ ಗೋವಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ಪ್ರೆಸ್ (Amaravati Express) ರೈಲು ಕರಂಜೋಳ್‌ವರೆಗೆ ತೆರಳಿ ಪುನಃ ಲೋಂಡಾವರೆಗೆ ವಾಪಸ್ ತಂದು ಪ್ರಯಾಣಿಕರನ್ನು ಅಲ್ಲಿಯೇ ಬಿಟ್ಟು ಬಸ್ ಮೂಲಕ ತೆರಳಲು ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.
Advertisement
ಇನ್ನು ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣವನ್ನು ಮಡಗಾಂವ್, ರೋಹಾ, ಪನ್ವೆಲ್, ಪುಣೆ, ದೌಂಡ್ ಕಾರ್ಡ್ ಲೈನ್ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ.
Advertisement
18048 ವಾಸ್ಕೋ ಡ ಗಾಮಾ (Vasco da Gama)- ಶಾಲಿಮಾರ್ ಎಕ್ಸ್ಪ್ರೆಸ್ ಪ್ರಯಾಣವು ವಾಸ್ಕೋ ಡ ಗಾಮಾ ಬದಲಿಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡಲಿದ್ದು, ವಾಸ್ಕೋ ಡ ಗಾಮಾ – ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.ಇದನ್ನೂ ಓದಿ: Nagamangala Violence | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಪ್ರಯಾಣಿಕರ ಸೌಕರ್ಯವನ್ನು ಖಚಿತಪಡಿಸಿಕೊಳ್ಳಲು, ಲೋಂಡಾ ನಿಲ್ದಾಣದಲ್ಲಿ ರೈಲು ಸಂಖ್ಯೆ 18047ರ ಅಂದಾಜು 1,100 ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಲೋಂಡಾದಲ್ಲಿಯೇ ಸಿಲುಕಿರುವ ಪ್ರಯಾಣಿಕರನ್ನು ಕರೆದೊಯ್ಯಲು 25 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣ ಪುನಃಸ್ಥಾಪನೆ ತ್ವರಿತಗೊಳಿಸಲು ಅಪಘಾತ ಪರಿಹಾರ ರೈಲನ್ನು ವಾಸ್ಕೋ ಡ ಗಾಮಾದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.