ಅಮರಾವತಿ: ಆಂಧ್ರ ಪ್ರದೇಶದಲ್ಲಿ (Andhra Pradesh) ಭಾನುವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ (Train Tragedy) ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದಿಂದಾಗಿ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ (Cancelled) ಎಂದು ರೈಲ್ವೆ ಇಲಾಖೆ (Railway Department) ತಿಳಿಸಿದೆ.
ಭಾನುವಾರ ಆಂಧ್ರ ಪ್ರದೇಶದ ವಿಜಯನಗರದಲ್ಲಿ (Vijayanagara) ಎರಡು ಪ್ಯಾಸೆಂಜರ್ ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದ ನಂತರ 12 ರೈಲುಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 15 ರೈಲುಗಳ ಮಾರ್ಗಗಳನ್ನು ಬದಲಾಯಿಸಲಾಗಿದ್ದು, 7 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ
Bulletin1:
Status of Trains Diverted/Cancelled/Short Terminated in the wake of train accident near Kantakapalle. pic.twitter.com/dRlIEyGs4L
— Ministry of Railways (@RailMinIndia) October 29, 2023
ಘಟನೆಯಲ್ಲಿ ಇಲ್ಲಿಯವರೆಗೆ 40 ಮಂದಿ ಗಾಯಗೊಂಡಿದ್ದಾರೆ. 32 ಮಂದಿಯನ್ನು ವಿಜಯನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಡಿಕೋವರ್ ಆಸ್ಪತ್ರೆಯಲ್ಲಿ ಇಬ್ಬರನ್ನು ದಾಖಲಿಸಿದ್ದು, ಎನ್‌ಆರ್‌ಐ ಆಸ್ಪತ್ರೆಯಲ್ಲಿ ಒಬ್ಬರನ್ನು ದಾಖಲಿಸಲಾಗಿದೆ. 4 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಗಾಯಗೊಂಡವರೆಲ್ಲರೂ ಆಂಧ್ರಪ್ರದೇಶದವರಾಗಿದ್ದಾರೆ ಎಂದು ವಿಜಯನಗರ ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದು, ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. ಮಾನವ ದೋಷದಿಂದ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿದ್ದು, ಸಿಗ್ನಲಿಂಗ್ ಅನ್ನು ಲೋಕೋ ಪೈಲಟ್ ಗಮನಿಸದ ಪರಿಣಾಮ ದುರಂತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಆಂಧ್ರದಲ್ಲಿ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]