– ಅರ್ಧ ಗಂಟೆಗೂ ಹೆಚ್ಚು ಕಾಲ ನಿಂತ ಮೆಟ್ರೋ; ಪರದಾಡಿದ ನೂರಾರು ಪ್ರಯಾಣಿಕರು
ಬೆಂಗಳೂರು: ನೇರಳೆ ಮಾರ್ಗದ ಕಬ್ಬನ್ ಪಾರ್ಕ್ (Cubbon Park) ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ವ್ಯತ್ಯಯವಾಗಿದೆ.
ಕೆಲವು ರೈಲುಗಳ ಸಂಚಾರದಲ್ಲಿ ಅಲ್ಪ ಪ್ರಮಾಣದ ವಿಳಂಬ ಉಂಟಾಗುವ ಸಾಧ್ಯತೆಯಿದೆ. ತಾಂತ್ರಿಕ ದೋಷವನ್ನು ಶೀಘ್ರವಾಗಿ ಸರಿಪಡಿಸಲು ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಉಂಟಾಗಿರುವ ಅನಾನುಕೂಲತೆಗೆ ವಿಷಾದಿಸುತ್ತೇವೆ. ಪ್ರಯಾಣಿಕರ ಸಹಕಾರಕ್ಕೆ ಧನ್ಯವಾದಗಳು ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: PUBLiC TV Impact| ಬಳ್ಳಾರಿ ವಿವಿ ಸರ್ಟಿಫಿಕೇಟ್ ಹಗರಣ – ಇಬ್ಬರು ಗುತ್ತಿಗೆ ನೌಕರರ ಮೇಲೆ ಕೊನೆಗೂ ಎಫ್‌ಐಆರ್
ಮೆಟ್ರೋ ಸಂಚಾರ ವ್ಯತ್ಯಯದಿಂದಾಗಿ ಪ್ರಯಾಣಿಕರು ಪರದಾಡಿದರು. ನಿಲ್ದಾಣದಲ್ಲಿ ನೂರಾರು ಸಂಖ್ಯೆಯಲ್ಲಿ ಜನ ಕಿಕ್ಕಿರಿದು ರೈಲಿಗಾಗಿ ಕಾಯುತ್ತಾ ನಿಂತಿರುವ ದೃಶ್ಯ ಕಂಡುಬಂತು.
ಮೆಟ್ರೋ ರೈಲು ಸಂಚಾರ ನಿಂತು ಅರ್ಧ ಗಂಟೆ ಆಯಿತು. ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಮೆಟ್ರೋ ರೈಲು ನಿಂತಿದೆ. ತಾಂತ್ರಿಕ ದೋಷದಿಂದ ಸಮಸ್ಯೆ ಆಗಿದೆ. ಬೇರೆ ಅರೆಂಜ್‌ಮೆಂಟ್ ಮಾಡ್ಕೊಳ್ಳಿ ಅಂತಿದ್ದಾರೆ ಎಂದು ಪ್ರಯಾಣಿಕರೊಬ್ಬರು ಸಮಸ್ಯೆ ಹೇಳಿಕೊಂಡಿದ್ದಾರೆ.
