ಭೋಪಾಲ್: ಇಬ್ಬರು ಟ್ರೈನಿ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಗನ್ ಹಿಡಿದು ಬೆದರಿಸಿ ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ (Indore) ಮಂಗಳವಾರ ತಡರಾತ್ರಿ ನಡೆದಿದೆ.
ಇಂದೋರ್ ಬಳಿಯ ಮೊವ್ ಆರ್ಮಿ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿರುವ ಇಬ್ಬರು ಅಧಿಕಾರಿಗಳು ಛೋಟಿ ಜಾಮ್‍ನ ಫೈರಿಂಗ್ ರೇಂಜ್ ಬಳಿಯ ಸ್ಥಳಕ್ಕೆ ಇಬ್ಬರು ಸ್ನೇಹಿತೆಯರ ಜೊತೆ ತೆರಳಿದ್ದರು. ಈ ವೇಳೆ ಎಂಟು ಜನ ದುಷ್ಕರ್ಮಿಗಳು ಪಿಸ್ತೂಲ್, ಚಾಕು ಮತ್ತು ಕೋಲುಗಳನ್ನು ಹಿಡಿದು ಅಧಿಕಾರಿಗಳನ್ನು ಸುತ್ತುವರೆದಿದ್ದಾರೆ. ಬಳಿಕ ದಾಳಿಕೋರರು ಒಬ್ಬ ಅಧಿಕಾರಿ ಮತ್ತು ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು 10 ಲಕ್ಷ ರೂ. ಹಣ ತರಲು ಇನ್ನೊಬ್ಬ ಅಧಿಕಾರಿ ಮತ್ತು ಮತ್ತೋರ್ವ ಮಹಿಳೆಯನ್ನು ಕಳುಹಿಸಿದ್ದಾರೆ. ಇದನ್ನೂ ಓದಿ: ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ
ತರಬೇತಿ ಶಾಲೆಗೆ ಹಿಂತಿರುಗಿದ ಅಧಿಕಾರಿ ತನ್ನ ಕಮಾಂಡಿಂಗ್ ಅಧಿಕಾರಿಗೆ ಈ ವಿಚಾರ ತಿಳಿಸಿದ್ದಾರೆ. ಬಳಿಕ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ (Police) ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸುತ್ತಿದ್ದಂತೆ ವಾಹನಗಳನ್ನು ನೋಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ಅಧಿಕಾರಿ ಹಾಗೂ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಕೋರರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಅದರಲ್ಲಿ ಒಬ್ಬ ಕ್ರಿಮಿನಲ್ ಹಿನ್ನೆಲೆ ಹೊಂದಿರುವುದು ಪತ್ತೆಯಾಗಿದೆ.
ಪ್ರಕರಣ ಸಂಬಂಧ ಲೂಟಿ, ಡಕಾಯಿತಿ, ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ (ಬಿಎನ್‍ಎಸ್) ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ – ನಾಗಮಂಗಲ ಗಲಭೆಗೆ ಪ್ರಹ್ಲಾದ್ ಜೋಶಿ ಆಕ್ರೋಶ