ಭೋಪಾಲ್: ಮಧ್ಯಪ್ರದೇಶದ (Madhya Pradesh) ಬಾಲಾಘಾಟ್ (Balaghat) ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವಿಮಾನವೊಂದು (Trainer Aircraft Crashes) ಪತನವಾಗಿದ್ದು, ತರಬೇತಿನಿರತ ಮಹಿಳಾ ಪೈಲಟ್ ಹಾಗೂ ವಿಮಾನ ಮಾರ್ಗದರ್ಶಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿನಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅದು ತರಬೇತಿ ವಿಮಾನವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿಯ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ತನ್ನದೇ ಕತ್ತು ಸೀಳಿ, ಚಾಕು, ಗನ್ ಹಿಡ್ಕೊಂಡು ದೆಹಲಿ ಬೀದಿಯಲ್ಲಿ ಓಡಾಡಿದ ವ್ಯಕ್ತಿ – ಜನ ಚೆಲ್ಲಾಪಿಲ್ಲಿ
ಲಾಂಜಿ ಮತ್ತು ಕಿರ್ನಾಪುರ್ ಪ್ರದೇಶಗಳ ಪರ್ವತ ವಲಯದಲ್ಲಿ ಮೃತದೇಹಗಳು ಪತ್ತೆಯಾಗಿವೆ. ಮೃತರು ಮಹಿಳಾ ಪೈಲಟ್ ರುಕ್ಷಂಕಾ, ಮಾರ್ಗದರ್ಶಿ ಮೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ತಿಳಿಸಿದ್ದಾರೆ.
ಬಾಲಾಘಾಟ್ ಗಡಿಯಲ್ಲಿರುವ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಬಿರ್ಸಿ ವಿಮಾನ ನಿಲ್ದಾಣದಿಂದ ಈ ತರಬೇತಿ ವಿಮಾನ ಹಾರಾಟ ಆರಂಭಿಸಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಏಷ್ಯಾದಲ್ಲೇ ಫಸ್ಟ್- ಎರಡೂ ಕೈಗಳ ಶಸ್ತ್ರಚಿಕಿತ್ಸೆ ಯಶಸ್ವಿ
ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಶನಿವಾರ ಬಾಲಾಘಾಟ್‌ನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಪ್ರತಿಕೂಲ ಹವಾಮಾನದಿಂದ ಈ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.